ರಾಜಕೀಯ

ಬಿಡದಿ ಟೌನ್​​ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!

ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್​ಶಿಪ್​ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ ಎಂದು ಪತ್ರದ ಮೂಲಕ ಉತ್ತರಿಸಿದ್ದಾರೆ.

ಬಿಡದಿ ಟೌನ್​​ಶಿಪ್ ಕದನ: HDK ಸವಾಲು ಸ್ವೀಕರಿಸಿದ CM; ಬೈರಮಂಗಲ ಬೇಡ, ವಿಧಾನಸೌಧಕ್ಕೆ ಬನ್ನಿ- ಡಿಕೆಶಿ ಪಂಥಾಹ್ವಾನ!
ಡಿಕೆ ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿ
Published On :

ಬೆಂಗಳೂರು: ಬಿಡದಿ ಟೌನ್​​ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ.

ಬಹಿಂರಂಗ ಚರ್ಚೆಗೆ ಬರುವಂತೆ ಕುಮಾರಸ್ವಾಮಿ ಹಾಕಿದ ಸವಾಲನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನೀವು ಪ್ರಾರಂಭಿಸಿರುವ ಬಿಡದಿ ಟೌನ್​ಶಿಪ್​ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ನಾನು ಉತ್ಸುಕನಾಗಿದ್ದೇನೆ. ಪತ್ರದ ಮೂಲಕ ಉತ್ತರಿಸಿದ್ದಾರೆ.

ಈ ಸಂಬಂಧ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಡಿಕೆ ಶಿವಕುಮಾರ್ ಅವರು, ಇದೇ ಜೂ.26ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌದಕ್ಕೆ ನೀವು ಮತ್ತು ನಿಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸಿ ಎಂದು ಕುಮಾರಸ್ವಾಮಿಗೆ ಹೇಳಿದ್ದಾರೆ.

ಆರಂಭದಲ್ಲಿ ಬಿಡದಿ ಟೌನ್​ಶಿಪ್ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಪರವಾಗಿ ಜೆಡಿಎಸ್​ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ ಎಂದ ಡಿಕೆ ಶಿವಕುಮಾರ್ ಹೇಳಿದ್ದರು. ಅಲ್ಲದೆ ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಹಿಂದೆಯೇ ಚರ್ಚೆಗೆ ಕರೆದಿದ್ದೆ. ಅದರೆ ಬರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ, ಇತರ ಅನುಭವಿ ರಾಜಕಾರಣಿಗಳ ಮೂಲಕ ಚರ್ಚೆ ಮಾಡಿಸಲಿ ಎಂದು ಹೇಳಿದ್ದರು. ಆದರೆ ಇಂದು ಕುಮಾರಸ್ವಾಮಿ ಸವಾಲು ಸ್ವೀಕರಿಸಿ ಚರ್ಚೆಗೆ ಸಮಯ ನಿಗದಿಪಡಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ಕುಮಾರಸ್ವಾಮಿ ಅವರು, ನಿಮ್ಮ ಆಹ್ವಾನಕ್ಕೆ ಧನ್ಯವಾದ. ಆದರೆ ಸಾಕಷ್ಟು ರೈತರು ಮತ್ತು ಪಾಲುದಾರರು ಬಿಡದಿ ಟೌನ್​​ಶಿಪ್ ಬಗ್ಗೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಪರಿಸರ ಕಾಳಜಿಯನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜೂನ್ 26ಕ್ಕೆ ಚರ್ಚೆಗೆ ಬರಲು ಆಗುವುದಿಲ್ಲ. ಹೀಗಾಗಿ ಜೂನ್ 27ಕ್ಕೆ ಚರ್ಚೆಯನ್ನು ನಿಗದಿಪಡಿಸಿ. ಆದರೆ ಆ ಚರ್ಚೆ ವಿಧಾನಸೌಧದಲ್ಲಿ ಬೇಡ. ಆ ಸಭೆಯನ್ನು ರಾಮಗನಗರ ಜಿಲ್ಲೆಯ ಬಿಡದಿ ಅಥವಾ ಭಾದಿತ ಪ್ರದೇಶವಾದ ಬೈರಮಂಗಲದಲ್ಲೇ ನಿಗದಿಪಡಿಸಿ ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.