ಆಣೆ-ಪ್ರಮಾಣಕ್ಕೆ ಬ್ರೇಕ್: ಏಕಾಂಗಿಯಾದ ಬಿ.ವೈ ವಿಜಯೇಂದ್ರ; ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ!
ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಹೇಳಿದ್ದರು.

ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ನಂತರ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿದ್ದಾರೆ.
ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಹೇಳಿದ್ದರು. ಆದರೆ ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಬೇಡ ಎಂದು ಪಕ್ಷದಲ್ಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು.
ಇದರ ಬೆನ್ನಲ್ಲೇ ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇಂದು ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ವಿಜಯೇಂದ್ರ ಅವರು, ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ವಿಜಯೇಂದ್ರ ಅವರು ನಾಳೆ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
ಧರ್ಮಸ್ಥಳದಲ್ಲಿ ಶಾಂಸಕ ಸಭೆಗೆ ಬ್ರೇಕ್ ಬಿದ್ದ ನಂತರ ಪಕ್ಷದ ಕೆಲವು ನಾಯಕರು ಈ ಗೊಂದಲಕ್ಕೆ ವಿಜಯೇಂದ್ರ ಅವರನ್ನೇ ದೂಷಿಸಲು ಆರಂಭಿಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಬೇಸರಗೊಂಡಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ, ಈಗ ಶಾಸಕರನ್ನು ಕರೆದೊಯ್ಯುವ ನಿರ್ಧಾರ ಕೈಬಿಟ್ಟು, ತಾವು ಒಬ್ಬರೇ ಧರ್ಮಸ್ಥಳಕ್ಕೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



