ರಾಜಕೀಯ

ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್‌ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ.

ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್‌ನ ಹಗರಣಲಕ್ಷ್ಮಿ; ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ "ಕೈ" ಇರುವುದು ಖಚಿತ..!
ಗೃಹಲಕ್ಷ್ಮಿ
Published On :

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿ (ಸಿಎಜಿ) ವರದಿಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

ಇದು ಗೃಹಲಕ್ಷ್ಮಿಯಲ್ಲ, ಕಾಂಗ್ರೆಸ್‌ನ ಹಗರಣಲಕ್ಷ್ಮಿ" ಎಂದು ಆರೋಪಿಸಿರುವ ಬಿಜೆಪಿ, ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಬಿಜೆಪಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರಿಗೆ ಕನಿಷ್ಠ ಒಂದು ಬ್ಯಾಂಕ್ ಖಾತೆಯಾದರೂ ಇರಬೇಕು. ಆದರೆ, ಬ್ಯಾಂಕ್ ಖಾತೆಯೇ ಇಲ್ಲದ 23,262 ಮಂದಿಗೆ ಗೃಹಲಕ್ಷ್ಮಿ ಹಣ ಜಮೆಯಾಗಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದಷ್ಟೇ ಅಲ್ಲದೆ, ಒಂದೇ ಬ್ಯಾಂಕ್ ಖಾತೆಯ ಮೂಲಕ 19,020 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿದೆ ಎಂದೂ ಸಿಎಜಿ ವರದಿ ಹೇಳಿದೆ.

ಈ ಬೆಳವಣಿಗೆಗಳನ್ನು ಗಮನಿಸಿದರೆ, "ಅಸಾಧ್ಯಗಳೆಲ್ಲವೂ ಸಾಧ್ಯವಾಗಿರುವ ಈ ಹಗರಣದ ಹಿಂದೆ ದೊಡ್ಡವರ 'ಕೈ' ಇರುವುದು ಖಚಿತ-ನಿಶ್ಚಿತ-ಖಂಡಿತ ಅಲ್ಲವೇ?" ಎಂದು ವಾಗ್ದಾಳಿ ನಡೆಸಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.