ವಿಜಯೇಂದ್ರ ವರ್ಚಸ್ಸು ಕುಗ್ಗಿಸಲು ಸಂಚು, ಪಕ್ಷದೊಳಗಿನ ಕೆಲವರಿಂದ ಅಪಪ್ರಚಾರ: ರೇಣುಕಾಚಾರ್ಯ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯೇಂದ್ರ ಅವರಿಗೆ ಆತ್ಮೀಯ ಸಂಬಂಧವಿದೆ ಎಂಬ ರೀತಿಯಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಈ ಆರೋಪಗಳಿಗೆ ಬಲ ನೀಡುವ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಎಡಿಟ್ ಮಾಡಲಾದ ವಿಡಿಯೊವನ್ನು ಸೋರಿಕೆ ಮಾಡಲಾಗಿದೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಪಕ್ಷದೊಳಗಿನ ಕೆಲವರು ಉದ್ದೇಶಪೂರ್ವಕವಾಗಿ ಷಡ್ಯಂತ್ರ ರೂಪಿಸಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ಜನಪ್ರಿಯತೆ ಹಾಗೂ ಪಕ್ಷದಲ್ಲಿನ ಬೆಳೆಯುತ್ತಿರುವ ಪ್ರಭಾವವನ್ನು ಕುಗ್ಗಿಸುವ ಉದ್ದೇಶದಿಂದ ಕೆಲವು ಸ್ವಾರ್ಥ ಶಕ್ತಿಗಳು ಸಂಚು ರೂಪಿಸಿವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯೇಂದ್ರ ಅವರಿಗೆ ಆತ್ಮೀಯ ಸಂಬಂಧವಿದೆ ಎಂಬ ರೀತಿಯಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಈ ಆರೋಪಗಳಿಗೆ ಬಲ ನೀಡುವ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಎಡಿಟ್ ಮಾಡಲಾದ ವಿಡಿಯೊವನ್ನು ಸೋರಿಕೆ ಮಾಡಲಾಗಿದೆ.
ವಿಜಯೇಂದ್ರ ಅವರ ವರ್ಚಸ್ಸನ್ನು ಕುಗ್ಗಿಸಲು ಕೆಲವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ಸಂಚುಗಳು ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ನವೆಂಬರ್‌ನಲ್ಲಿ ವಿಜಯೇಂದ್ರ ಅವರ ರಾಜ್ಯಾಧ್ಯಕ್ಷರ ಅವಧಿ ಮುಕ್ತಾಯವಾಗಲಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ವಿಜಯೇಂದ್ರ ಅವರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಅವರು ನವೆಂಬರ್ ನಂತರವೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂಬ ನಂಬಿಕೆ ಇದೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



