ರಾಜಕೀಯ

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ

ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ಅಡ್ಡ ಮತದಾನ: ವಿಜಯೇಂದ್ರಗೆ ತನಿಖಾ ವರದಿ ಸಲ್ಲಿಸಿದ ಸಿಟಿ ರವಿ
ವರದಿ ಸಲ್ಲಿಸಿದ ಸಿಟಿ ರವಿ
Published On :

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ.

ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ ಸಿದ್ಧಪಡಿಸಿದ್ದಾರೆ.

ಈ ಮಧ್ಯಂತರ ವರದಿಯನ್ನು ಬಿಜೆಪಿ ಕಚೇರಿಯಲ್ಲಿ ಸಲ್ಲಿಕೆ ಮಾಡಿದ್ದು, ಬಳಿಕ ಬಿವೈವಿ ಹಾಗೂ ಸಿಟಿ ರವಿ ಇಬ್ಬರೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ.

ನಾಲ್ಕು ದಿನಗಳ ಕಾಲ ಆಂತರಿಕ ತನಿಖೆ ನಡೆಸಿದ ಸಮಿತಿಯು ಒಟ್ಟು ಮೂರು ಪುಟಗಳ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ. ಮೈತ್ರಿ ಪಕ್ಷಗಳಿಂದ ಒಟ್ಟು 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಈ ಪೈಕಿ 1 ಅಸಿಂಧು ಮತ. ಬಿಜೆಪಿಯಿಂದ 1 ಅಸಿಂಧು ಮತ ಸೇರಿ ಒಟ್ಟು 4 ಅಡ್ಡಮತ ಆಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ಹೊರತಾಗಿ ಉಳಿದ ಅಡ್ಡ ಮತಗಳು ಜೆಡಿಎಸ್‌ನಿಂದಾಗಿವೆ. ವರದಿಯಲ್ಲಿ ಅಡ್ಡ ಮತ ಚಲಾಯಿಸಿದ ಶಾಸಕರ ಹೆಸರು ಉಲ್ಲೇಖಿಸಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.