ರಾಜಕೀಯ

2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ ಶಿವಕುಮಾರ್

ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು.

2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ; 2029ರಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ: ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, 2029ರ ಲೋಕಸಭೆ ಚುನಾವಣೆಯ ಬಳಿಕ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾರ್ಮಿಕರ ಕಾಂಗ್ರೆಸ್ (INTUC) 316ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕತೆಗೆ ಕಾರ್ಮಿಕರೇ ಬೆನ್ನೆಲುಬಾಗಿದ್ದು, ಅವರ ಕೊಡುಗೆಯಿಲ್ಲದೆ ಯಾವುದೇ ರಾಷ್ಟ್ರ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದರು.

ಜೂನ್ 30ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಪರಿಶೀಲಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಕಾರ್ಮಿಕರು, ಮಹಿಳೆಯರು ಹಾಗೂ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ರೂಪಿಸಲಾಗಿದ್ದು, ಈ ಯೋಜನೆಗಳಿಗೆ ರಾಜ್ಯ ಸರ್ಕಾರ ವಾರ್ಷಿಕ ₹50,000 ಕೋಟಿಗೂ ಹೆಚ್ಚು ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ, ಜನರ ಬೆಂಬಲದೊಂದಿಗೆ ಮುಂಬರುವ ಚುನಾವಣೆಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.