Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಖಾಲಿ ಚೊಂಬು ಕೊಟ್ಟಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿ ಕಾರಿದೆ.
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದೆ.
ರಾಜ್ಯದ ಜನತೆಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರಾಜ್ಯದ ಜನತೆಯನ್ನು ಸಾಲದ ಸುಳಿಯಲ್ಲಿ ಸಿಲುಕಿಸುವಂತಹ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ವಿಜಯೇಂ ಮತ್ತು ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಮುಂಭಾಗದಲ್ಲಿ ಖಾಲಿ ಚೊಂಬು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಆರ್ ಅಶೋಕ್, ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಲ ಪಡೆದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದೆ. ಸಾಲ ಮಾಡಿ ತುಪ್ಪ ತಿನ್ನುತ್ತಿದೆ. ಈ ಬಜೆಟ್ ನೀರಸವಾಗಿದೆ. ಇದರಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ. ಹೊಸ ಯೋಜನೆ ಎಂದರೆ ಹೆಚ್ಚು ಹೆಚ್ಚು ಸಾಲ ಪಡೆಯುವುದು ಮಾತ್ರ" ಎಂದು ಟೀಕಿಸಿದರು.
ಕಳೆದ ಮೂರು ವರ್ಷಗಳಲ್ಲಿ, ರಾಜ್ಯ ಸರ್ಕಾರವು 4.39 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಅಶೋಕ್ ಆರೋಪಿಸಿದರು.
ಮುಂದೆ ಅಧಿರಾಕ್ಕೆ ಬರುವ ಸರ್ಕಾರಗಳು ಬಡ್ಡಿಯನ್ನು ಪಾವತಿಸುವ ಸ್ಥಿತಿಯಲ್ಲಿರುವುದಿಲ್ಲ, ಅಸಲು ಮೊತ್ತವನ್ನು ಬಿಟ್ಟು, ಹಣಕಾಸಿನ ಕೊರತೆಯು 97,000 ಕೋಟಿ ರೂ.ಗಳನ್ನು ತಲುಪಿದೆ ಎಂದು ಬಿಜೆಪಿ ನಾಯಕ ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ಉಪನಾಯಕರಾದ ಶ್ರೀ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



