ರಾಜಕೀಯ

ಪುತ್ರನಿಗೆ ಟಿಕೆಟ್ ತಪ್ಪುವ ಆತಂಕ: 'ಅವನ್ಯಾರು ಇಲ್ಲಿ ಬಂದು ಮಾತಾಡೋಕೆ'? ಅಲ್ಪಸಂಖ್ಯಾತ ಅಭ್ಯರ್ಥಿ ಬೇಕೆಂದ ಜಮೀರ್‌ ವಿರುದ್ಧ ಮಲ್ಲಿಕಾರ್ಜುನ್ ಕಿಡಿ

ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ.

ಪುತ್ರನಿಗೆ ಟಿಕೆಟ್ ತಪ್ಪುವ ಆತಂಕ: 'ಅವನ್ಯಾರು ಇಲ್ಲಿ ಬಂದು ಮಾತಾಡೋಕೆ'? ಅಲ್ಪಸಂಖ್ಯಾತ ಅಭ್ಯರ್ಥಿ ಬೇಕೆಂದ ಜಮೀರ್‌ ವಿರುದ್ಧ  ಮಲ್ಲಿಕಾರ್ಜುನ್ ಕಿಡಿ
ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್
Published On :

ದಾವಣಗೆರೆ: ಕಾಂಗ್ರೆಸ್​​ನಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ಜೋರಾಗಿರುವ ಹೊತ್ತಲ್ಲೇ, ಬಣ ಗುದ್ದಾಟ ಹಾಗೂ ಕೆಲ ನಾಯಕರ ನಡುವೆ ಅಸಮಾಧನಾ ಸ್ಫೋಟದಂತಹ ಬೆಳವಣಿಗೆಗಳು ನಡೆಯುತ್ತಿದೆ.

ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಕೊಡಿಸಲು ಜಮೀರ್ ಅಹ್ಮದ್​ ಖಾನ್ ಲಾಬಿ ನಡೆಸುತ್ತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಈ ವಿಚಾರಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬಹಿರಂಗವಾಗಿದೆ ಜಮೀರ್​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 'ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು. ಇವೆಲ್ಲ ಸರಿ ಇರಲ್ಲ. ಇಲ್ಲಿ ಬಂದು ಮಾತನಾಡೋಕೆ ಅವನಿಗೆ ಅಧಿಕಾರ ಕೊಟ್ಟವರು ಯಾರು? ಪಕ್ಷದ ಸಭೆ ಕರೆದಾಗ ನಾನು ಈ ಬಗ್ಗೆ ಮಾತನಾಡುತ್ತೇನೆ, ಈಗ ಮಾತನಾಡಲ್ಲ' ಎಂದು ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ.

ಜನವರಿ 26ರಂದು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಜಮೀರ್ ಅಹ್ಮದ್, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ಹೈಕಮಾಂಡ್ ಮತ್ತು ವರಿಷ್ಠರಿಗೆ ಮನವಿ ಮಾಡುವುದಾಗಿ ಜಮೀರ್ ನೀಡಿದ್ದ ಹೇಳಿಕೆ ಈಗ ಮಲ್ಲಿಕಾರ್ಜುನ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ಇದೇ ವೇಳೆ ಸಚಿವ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಅವರಿಗೆ ಟಿಕೆಟ್ ನೀಡಬೇಕೆಂದು ಕೆಲವು ನಾಯಕರು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಈ ಬಗ್ಗೆ ನನಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಸಭೆ ಕರೆದಾಗ ನಾಯಕರು ಏನು ಹೇಳುತ್ತಾರೆ ಎಂಬುವುದನ್ನು ಕೇಳೋಣ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ' ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.