ರಾಜಕೀಯ

ಕಡು ಭ್ರಷ್ಟರು ಇರೋವರೆಗೂ ಬಿಜೆಪಿ ಸೇರೋಲ್ಲ; 2028 ಕ್ಕೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಪುತ್ರನ ಮದುವೆಯ ಆಹ್ವಾನ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಡು ಭ್ರಷ್ಟರು ಇರೋವರೆಗೂ ಬಿಜೆಪಿ ಸೇರೋಲ್ಲ; 2028 ಕ್ಕೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Published On :

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಪುತ್ರನ ಮದುವೆಯ ಆಹ್ವಾನ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಕರೆಯುವ ನಿರೀಕ್ಷೆಯಲ್ಲಿ ಇರಲು ತಾನು ಹುಚ್ಚನಲ್ಲ ಎಂದು ಹೇಳಿದ ಅವರು, ಪಶ್ಚಿಮ ಬಂಗಾಳ, ಬಿಹಾರ್ ಅಥವಾ ಉತ್ತರ ಪ್ರದೇಶ ಚುನಾವಣೆಗಳ ನಂತರ ಬಿಜೆಪಿ ಕರೆದರೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಾದೇಶಿಕ ಪಕ್ಷವನ್ನು ಕಟ್ಟುವುದಾಗಿ ಘೋಷಿಸಿದ ಅವರು, ಸೂಕ್ತ ಸಮಯದಲ್ಲಿ ಪಕ್ಷ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅದು ಜೆಸಿಬಿ ಚಿಹ್ನೆಯಡಿ ಕಾರ್ಯನಿರ್ವಹಿಸಲಿದೆಯೇ ಎಂಬ ಪ್ರಶ್ನೆಗೆ, ನೋಡೋಣ ಎಂದು ಉತ್ತರಿಸಿದ್ದಾರೆ. ತಮ್ಮದೇ ಪಕ್ಷ ರಚನೆಯಾಗಲಿದ್ದು, 2028ರ ವಿಧಾನಸಭೆ ಚುನಾವಣೆ ನಂತರ ನಾನು ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಯತ್ನಾಳ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.