ಖರ್ಗೆ ಜೊತೆ ದೆಹಲಿಗೆ ಹಾರಿದ ಡಿಕೆಶಿ: ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಪಕ್ಕ? ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆ-ಪುಕ್ಕ!
ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ.

ಬೆಂಗಳೂರು: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಲಹಕ್ಕೆ ಕಾರಣವಾಗಿದೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ಪ್ರಯಾಣ ಬೆಳೆಸಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್‌ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



