ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜೆಡಿಎಸ್ಗೆ 1 ಸೀಟು!
ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನವೆಂಬರ್ 2026 ರಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಒಟ್ಟು ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪ್ರಕಟಿಸಿದೆ.
ಇನ್ನುಳಿದ 1 ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ.
ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ.ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನುಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಜೆಡಿಎಸ್ ಯಾರನ್ನು ಕಣಕ್ಕಿಳಿಸಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



