'ಕುಮಾರಸ್ವಾಮಿಯನ್ನು ಮೋದಿ-ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'
ಜೆಡಿಎಸ್ ಗೆ ಎಷ್ಟು ಸೀಟು ಬಿಡ್ತೀರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಈ ವೇಳೆ ಪ್ರಮಾಣ ವಚನಕ್ಕೆ ಕರೆಯುತ್ತೀವಿ, ಯಾರು ಮುಖ್ಯಮಂತ್ರಿ ಆಗಿರುತ್ತಾರೆ ಅಂತಾ ಅವಾಗ ನೋಡಿ ಎಂದು ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು.

ಬೆಂಗಳೂರು: ಕರ್ನಾಟಕದ ಮುಂದಿನ ಸಿಎಂ ಎಚ್‌ಡಿ ಕುಮಾರಸ್ವಾಮಿ ಎಂಬ ವಿಚಾರ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಯಿತು. ಗುರುವಾರ ಬಜೆಟ್ ಮೇಲಿನ ಚರ್ಚೆ ವೇಳೆ ಮೈತ್ರಿಯಲ್ಲಿ ಮುಂದಿನ ಸಿಎಂ ಕುಮಾರಸ್ವಾಮಿ ಎಂಬ ವಿಚಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ಬಿರುಸಿನ ಮಾತುಗಳ ವಿನಿಮಯಕ್ಕೆ ಕಾರಣವಾಯಿತು.
ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕರ್ನಾಟಕ ಮುಂದೆ ಕಾಂಗ್ರೆಸ್ ಮುಕ್ತ ರಾಜ್ಯವಾಗಲಿದೆಎಂದ ಬಿಜೆಪಿ ಶಾಸಕ ಸಿದ್ದು ಸವದಿ ಹೇಳಿದರು. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿ, ಜೆಡಿಎಸ್ ನ ಕುಮಾರಸ್ವಾಮಿಯನ್ನು ಮೋದಿ ಅಮಿತ್ ಶಾ ಸಿಎಂ ಮಾಡ್ತಾರಂತೆ. ನಿಮ್ಮ ಹಣೆಬರಹ ಏನಾಗಿದೆ ರೀ ರಾಜ್ಯದಲ್ಲಿ? ಎಂದು ಪ್ರಶ್ನಿಸಿದರು.
ಈ ವೇಳೆ ನಿಮ್ಮಲ್ಲಿ ಯಾರು ಮುಖ್ಯಮಂತ್ರಿ ಅಂತಾ ಮೊದಲು ಹೇಳಿ. ಇವರೇ ಇರುತ್ತಾರಾ ಅಥವಾ ಬದಲಾವಣೆ ಆಗ್ತಾರಾ ? ಎಂದು ಬಿಜೆಪಿ ಸದಸ್ಯ ಸುನೀಲ್ ಕುಮಾರ್ ತಿರುಗೇಟು ನೀಡಿದರು. ಅಲ್ಲದೆ, 2028ಕ್ಕೆ ಬಿಜೆಪಿಯವರೇ ಮುಖ್ಯಮಂತ್ರಿ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು. ನಮ್ಮ ಹಣೆಬರಹ 2028ಕ್ಕೆ, ಇವಾಗ ನಿಮ್ಮ ಹಣೆಬರಹ ಏನೆಂದು ನೋಡಿಕೊಳ್ಳಿ ಎಂದು ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು.
ಈ ವೇಳೆ ಜೆಡಿಎಸ್ ಜೊತೆ ಹೋಗಿದ್ದೀರಲ್ಲ, ಜೆಡಿಎಸ್ ಗೆ ಎಷ್ಟು ಸೀಟು ಬಿಡ್ತೀರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಈ ವೇಳೆ ಪ್ರಮಾಣ ವಚನಕ್ಕೆ ಕರೆಯುತ್ತೀವಿ, ಯಾರು ಮುಖ್ಯಮಂತ್ರಿ ಆಗಿರುತ್ತಾರೆ ಅಂತಾ ಅವಾಗ ನೋಡಿ ಎಂದು ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು.
ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡ್ತೀರಾ ಹೇಳ್ರಿ ಎಂದು ಪ್ರಿಯಾಂಕ್ ಖರ್ಗೆ ಕಾಲೆಳೆದರು. ಕುಮಾರಸ್ವಾಮಿ ಸಿಎಂ ಆಗೋದಿಲ್ಲ, ಬಿಜೆಪಿಯೇ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಸಿಎಂ ಆಗುತ್ತಾರೆ ಅಂತಾ ಮಾಧ್ಯಮಗಳ ಮುಂದೆ ಹೇಳಿ ನೋಡೋಣ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.
ಮುಸ್ಲಿಮರನ್ನು ಓಲೈಸಿ ಮತ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಇತರ ಸಮುದಾಯಗಳನ್ನು ನಿರ್ಲಕ್ಷಿಸಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಅನೇಕ ಸಮೀಕ್ಷೆಗಳು 'ಕಾಂಗ್ರೆಸ್ ಮುಕ್ತ ಭಾರತ' ಇರುತ್ತದೆ ಎಂದು ಸೂಚಿಸಿವೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಎಂದಿಗೂ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದರು, ಕರ್ನಾಟಕದಲ್ಲಿ ಬಿಜೆಪಿಯ ಭವಿಷ್ಯದ ಬಗ್ಗೆ ಯೋಚಿಸುವಂತೆ ಸೂಚಿಸಿದರು, 2028 ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಬರಲಿದೆ ಎಂದು ಹೇಳಿದರು.
16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು ಶ್ಲಾಘಿಸಿದ ಸವದಿ, ದಂಪತಿಗಳು ಮದುವೆಯಾಗಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ ಎಂದು ಖಚಿತಪಡಿಸಿಕೊಳ್ಳಲು 'ಲವ್ ಜಿಹಾದ್' ಅನ್ನು ತಡೆಯಲು ಹೊಸ ಕಾನೂನು ಅಗತ್ಯವಿದೆ ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



