ರಾಜಕೀಯ

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ.

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ
ದಾವಣಗೆರೆ ಮತ್ತು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ
Published On :

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಇಂದು ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಬಿಜೆಪಿ ಮಣೆ ಹಾಕಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಜಾತಿ ಲೆಕ್ಕಾಚಾರದಲ್ಲಿ ತಂತ್ರವನ್ನು ಬಿಜೆಪಿ ಹೆಣೆದಿದೆ. ಎಸ್‌ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.