ದಾವಣಗೆರೆ ದಕ್ಷಿಣ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ನಾಮಪತ್ರ ಸಲ್ಲಿಕೆ, ಗೆಲ್ಲುವ ವಿಶ್ವಾಸ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ಕಾಂಗ್ರೆಸ್‌ಗೆ ಲಾಭವಾಗುವಂತೆ ಯಾವುದೇ ಹೇಳಿಕೆ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದರು.

ದಾವಣೆಗೆರೆ: ಏಪ್ರಿಲ್ 9 ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸ ಕರಿಯಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಶ್ರೀನಿವಾಸ್ ಮುಂದಾಗಿದ್ದಾರೆ.
ಬೆಂಬಲಿಗರಾದ ರಾಜನಹಳ್ಳಿ ಶಿವಕುಮಾರ್, ಯಶವಂತ್ ರಾವ್ ಜಾದವ್, ಬಿ.ಜೆ. ಅಜಯ್ ಕುಮಾರ್ ಅವರೊಂದಿಗೆ ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ ಸಮರ್ಥ ಶಾಮನೂರು ಕೂಡ ತಮ್ಮ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಸಲ್ಲಿಕೆಯ ನಂತರ ಮಾತನಾಡಿದ ಶ್ರೀನಿವಾಸ್ ಅವರು, ಈ ಉಪಚುನಾವಣೆಯಲ್ಲಿ ಗೆಲುವು ನನ್ನದಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
2023ರಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ರಸ್ತೆ ಸೇರಿದಂತೆ ಮೂಲಸೌಕರ್ಯಗಳಲ್ಲಿ ಹಿನ್ನಡೆ ಕಂಡುಬಂದಿದೆ ಎಂದು ಟೀಕಿಸಿದರು.
ಸೋಮವಾರ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಮತ್ತೊಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ನಡುವೆ ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ಕಾಂಗ್ರೆಸ್‌ಗೆ ಲಾಭವಾಗುವಂತೆ ಯಾವುದೇ ಹೇಳಿಕೆ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಿದರು.
ಈ ನಡುವೆ, ಅಹಿಂದ ನಾಯಕ ಹಾಗೂ ಇನ್ಸೈಟ್ಸ್ ಐಎಎಸ್ ಅಕಾಡೆಮಿ ಮುಖ್ಯಸ್ಥ ಜಿ.ಬಿ. ವಿನಯ್ ಕುಮಾರ್ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



