ರಾಜಕೀಯ

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ; ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ; ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ನಮ್ಮ ನಾಯಕರು ಹೇಳಿದ್ದಾರೆ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಅಭಿಪ್ರಾಯದಂತೆ ನಾವು ಹೈಕಮಾಂಡ್ ಗೆ ನಮ್ಮ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ" ಎಂದು ತಿಳಿಸಿದರು.

S.S.ಮಲ್ಲಿಕಾರ್ಜುನ್ ಜೊತೆಗೆ ಕೂಡ ಮಾತನಾಡಿದೆ. ಒಳ್ಳೇ ದಿನ ಅನ್ನೋ ಕಾರಣಕ್ಕೆ ನಾಮಪತ್ರ ಸಲ್ಲಿಸಿದ್ದಾನೆ ಎಂದಿದ್ದಾರೆ. ಅಗತ್ಯಬಿದ್ರೆ ಹಿಂಪಡೆಯುತ್ತೇನೆ ಅಂತಾನೂ ಹೇಳಿದ್ದಾರೆ. ಅಲ್ಪಸಂಖ್ಯಾತರು ಪಕ್ಷ ಹೇಳಿದ್ದು ಮಾಡುತ್ತೇವೆ ಅಂದಿದ್ದಾರೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಅಂತ ಎಲ್ಲಾ ಹೇಳಿದ್ದಾರೆ. ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡಿ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.