ರಾಜಕೀಯ

ಅಮಿತ್ ಶಾ ಭೇಟಿಯಾದ HDK: DVS ಬದಲು ರಾಜ್ಯಸಭೆಗೆ ದೇವೇಗೌಡರನ್ನು ಕಳುಹಿಸಲು ಬೇಡಿಕೆ!

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಾಲ್ವರು ಸದಸ್ಯರ ಅವಧಿ ಜೂನ್‌ನಲ್ಲಿ ಮುಗಿಯಲಿದೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಸದಸ್ಯತ್ವ ಮುಗಿಯಲಿದೆ

ಅಮಿತ್ ಶಾ ಭೇಟಿಯಾದ HDK: DVS ಬದಲು ರಾಜ್ಯಸಭೆಗೆ ದೇವೇಗೌಡರನ್ನು ಕಳುಹಿಸಲು ಬೇಡಿಕೆ!
ಅಮಿತ್ ಶಾ ಭೇಟಿಯಾದ ಹೆಚ್‌ಡಿಕೆ
Published On :

ನವದೆಹಲಿ: ಯುಗಾದಿ ಶುಭಾಶಯ ಕೋರುವ ನೆಪದಲ್ಲಿ ಕೇಂದ್ರದ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಾಲ್ವರು ಸದಸ್ಯರ ಅವಧಿ ಜೂನ್‌ನಲ್ಲಿ ಮುಗಿಯಲಿದೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಸದಸ್ಯತ್ವ ಮುಗಿಯಲಿದೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್‌ ನಿರಾಯಾಸವಾಗಿ ಗೆಲ್ಲಲಿದೆ. ಜೆಡಿಎಸ್‌ ನೆರವಿಲ್ಲದೆ ಇನ್ನೊಂದು ಸ್ಥಾನ ಗೆಲ್ಲುವಷ್ಟು ಮತಗಳನ್ನು ಬಿಜೆಪಿ ಹೊಂದಿದೆ.

ಈ ಸ್ಥಾನವನ್ನು ದೇವೇಗೌಡರಿಗೆ ಬಿಟ್ಟುಕೊಡಬೇಕು ಎಂಬುದು ಜೆಡಿಎಸ್ ನಾಯಕರ ಅಪೇಕ್ಷೆ. ಆದರೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು ಎಂಬುದು ಬಿ.ಎಸ್‌.ಯಡಿಯೂರಪ್ಪ ಕುಟುಂಬದ ಹಂಬಲ. ಈ ವಿಷಯದ ಬಗ್ಗೆಯೂ ಕುಮಾರಸ್ವಾಮಿ ಅವರು ಶಾ ಅವರಲ್ಲಿ ಪ್ರಸ್ತಾಪಿಸಿದರು ಎಂದು ಮೂಲಗಳು ಹೇಳಿವೆ.

ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಾಯಕರು ಸೌಜನ್ಯಕ್ಕೂ ಅಭಿಪ್ರಾಯ ಕೇಳಿಲ್ಲ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಜೆಡಿಎಸ್‌ ಈ ಹಿಂದೆ ಜಯ ಗಳಿಸಿತ್ತು. ಈ ಸಲ ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಮನವಿ ಮಾಡಿತ್ತು.

ಆದರೆ, ಬಿಜೆಪಿ ಪ್ರಮುಖರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸದೆಯೇ ಸಂಭಾವ್ಯರ ಹೆಸರನ್ನು ವರಿಷ್ಠರಿಗೆ ಕಳುಹಿಸಲಾಗಿತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನಷ್ಟೇ ನಮ್ಮ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಇಂತಹ ಧೋರಣೆ ಸರಿಯಲ್ಲ ಎಂದೂ ಕುಮಾರಸ್ವಾಮಿ ಅವರು ಶಾ ಗಮನಕ್ಕೆ ತಂದರು ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.