ಕಾಂಗ್ರೆಸ್ ಮಾತ್ರವಲ್ಲ, ಎಲ್ಲಾ ಪಕ್ಷಗಳಲ್ಲಿಯೂ ಕುಟುಂಬ ರಾಜಕೀಯವಿದೆ: ಸತೀಶ್ ಜಾರಕಿಹೊಳಿ
ಪ್ರತಿಯೊಂದು ಪಕ್ಷದಲ್ಲೂ ಕುಟುಂಬ ರಾಜಕೀಯವಿದೆ. ಅಂತಿಮವಾಗಿ, ಪಕ್ಷಗಳು ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗುತ್ತದೆ ಎಂದು ಸತೀಶ್ ಹೇಳಿದರು

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕುಟುಂಬ ರಾಜಕೀಯಕ್ಕೆ ಮಣೆ ಹಾಕಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಕುಟುಂಬ ರಾಜಕೀಯ ಎಂಬುದು ಎಲ್ಲಾ ಪಕ್ಷಳಲ್ಲಿಯೂ ಇದೆ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ಗೆ ಸೀಮಿತವಾಗಿಲ್ಲ. ಪ್ರತಿಯೊಂದು ಪಕ್ಷದಲ್ಲೂ ಕುಟುಂಬ ರಾಜಕೀಯವಿದೆ. ಅಂತಿಮವಾಗಿ, ಪಕ್ಷಗಳು ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗುತ್ತದೆ ಎಂದು ಸತೀಶ್ ಹೇಳಿದರು. ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರವನ್ನು ಬೆಂಬಲಿಸಿದ ಸತೀಶ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರು ಆರಾಮದಾಯಕ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಮೇಟಿಗೆ ಟಿಕೆಟ್ ನೀಡಬೇಕೆಂದು ನಿರೀಕ್ಷಿಸಿದ್ದರು ಮತ್ತು ಹೈಕಮಾಂಡ್ ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಿದೆ ಎಂದು ಅವರು ಹೇಳಿದರು. ಮೇಟಿ ಕುಟುಂಬವು ಬಾಗಲಕೋಟೆಯ ಜನರಲ್ಲಿ ಅಪಾರ ಗೌರವವನ್ನು ಹೊಂದಿದೆ. ನಾವು ಕಳೆದ ಎರಡು ತಿಂಗಳಿನಿಂದ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ ಮತ್ತು ಅವರ ಗೆಲ್ಲುವುದರಲ್ಲಿ ಯಾವುದೇ ತೊಂದರೆ ಇಲ್ಲ" ಎಂದು ಅವರು ಹೇಳಿದರು.
ಮೇಟಿ ಪರ ಸಕ್ರಿಯವಾಗಿ ಪ್ರಚಾರ ಮಾಡುವುದಾಗಿ ಮತ್ತು ದಾವಣಗೆರೆಯಲ್ಲಿ ಪ್ರಚಾರದಲ್ಲಿ ಭಾಗವಹಿಸುವುದಾಗಿ ಸಚಿವರು ಹೇಳಿದರು. ಜಾತಿ ಆಧಾರಿತ ಚುನಾವಣೆ ಅಲ್ಲ. ಪಕ್ಷ ಆಧಾರಿತ ಚುನಾವಣೆ ನಡೆಯುತ್ತದೆ. ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯದ ಸಂಖ್ಯೆ ಹೆಚ್ಚಿದೆ. ಅದಕ್ಕೆ ಅವರು ಬೇಡಿಕೆ ಇಟ್ಟಿದ್ದರು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



