ರಾಜಕೀಯ

ಕೇಂದ್ರದ ಮೇಲಿನ ದ್ವೇಷಕ್ಕೆ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುವ ಸರ್ಕಾರದ ತೀರ್ಮಾನ ವಿವೇಕ ರಹಿತ: ಹಿಂದಿ ಭಾಷೆ ಕೈಬಿಟ್ಟ ರಾಜ್ಯ ಸರ್ಕಾರದ ವಿರುದ್ಧ BJP ಕಿಡಿ

ಕಳೆದ ಹಲವು ದಶಕಗಳಿಂದ ದೇಶದಲ್ಲೇ ಮಾದರಿ ಶಿಕ್ಷಣದಲ್ಲಿ ತ್ರಿಭಾಷಾ ನೀತಿ ಹೊಂದಿರುವ ಕರ್ನಾಟಕದಲ್ಲಿ ಯಾವುದೇ ಪೂರ್ವಾಪರ ಚರ್ಚೆ, ಶಿಕ್ಷಣ ತಜ್ಞರ ಸಲಹೆ, ಪ್ರತಿಪಕ್ಷಗಳ ನಿಲುವು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ.

ಕೇಂದ್ರದ ಮೇಲಿನ ದ್ವೇಷಕ್ಕೆ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುವ ಸರ್ಕಾರದ ತೀರ್ಮಾನ ವಿವೇಕ ರಹಿತ: ಹಿಂದಿ ಭಾಷೆ ಕೈಬಿಟ್ಟ ರಾಜ್ಯ ಸರ್ಕಾರದ ವಿರುದ್ಧ BJP ಕಿಡಿ
ಬಿಜೆಪಿ — online desk
Published On :

ಬೆಂಗಳೂರು: ಕೇವಲ ರಾಜಕೀಯ ವಿರೋಧಕ್ಕಾಗಿ ಕೇಂದ್ರ ಸರಕಾರದ ಮೇಲಿನ ದ್ವೇಷಕ್ಕಾಗಿ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ರಾಜ್ಯ ಸರ್ಕಾರದ ತೀರ್ಮಾನ ವಿವೇಕ ರಹಿತ ಹಾಗೂ ಆಘಾತಕಾರಿ ಎಂದು ಬಿಜೆಪಿ ಹೇಳಿದೆ.

ನಿನ್ನೆಯಷ್ಟೇ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದಾರೆ. ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ SSLC ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕಳೆದ ಹಲವು ದಶಕಗಳಿಂದ ದೇಶದಲ್ಲೇ ಮಾದರಿ ಶಿಕ್ಷಣದಲ್ಲಿ ತ್ರಿಭಾಷಾ ನೀತಿ ಹೊಂದಿರುವ ಕರ್ನಾಟಕದಲ್ಲಿ ಯಾವುದೇ ಪೂರ್ವಾಪರ ಚರ್ಚೆ, ಶಿಕ್ಷಣ ತಜ್ಞರ ಸಲಹೆ, ಪ್ರತಿಪಕ್ಷಗಳ ನಿಲುವು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ SSLC ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ನಾವು ಕನ್ನಡ ಭಾಷೆಯಲ್ಲಿ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಕನ್ನಡ ನಮ್ಮ ಮಾತೃಭಾಷೆ. ಕನ್ನಡವು ನಮ್ಮ ಬೋಧನಾ ಭಾಷೆಯಾಗಿ ಜಾಗತಿಕ ದೃಷ್ಟಿಕೋನದಿಂದ ಇಂಗ್ಲಿಷ್ ಕಲಿಕೆಗೂ ನಮ್ಮ ಅಭ್ಯಂತರವಿಲ್ಲ. ಹಾಗೆಯೇ ಕನ್ನಡಿಗರು ದೇಶದ ಅನೇಕ ರಾಜ್ಯಗಳಿಗೆ ಉದ್ಯೋಗ ಅರಸಿ ಹೋದಾಗ ಕನಿಷ್ಠಮಟ್ಟದ ಹಿಂದಿ ಭಾಷೆಯ ಅರಿವು ಇರಬೇಕಾಗುತ್ತದೆ. ಕೇಂದ್ರ ಸರಕಾರದ ಉದ್ಯೋಗಗಳಿಗೆ ಸೇರ್ಪಡೆಗೊಳ್ಳುವ ಕರ್ನಾಟಕದ ಯುವಸಮೂಹವು ರಾಷ್ಟ್ರಮಟ್ಟದಲ್ಲಿ ಹಿಂದೆ ಬೀಳಬಾರದು ಎಂಬ ಕಾಳಜಿ ನಮ್ಮದು.

ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರವೂ ಕನ್ನಡವನ್ನು ಅಸ್ಮಿತೆಯಾಗಿ, ಇಂಗ್ಲಿಷ್‌ನ್ನು ಸಂವಹನ ಭಾಷೆಯಾಗಿ ಹಾಗೂ ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಆದಾಗ್ಯೂ ಹಿಂದಿ ಭಾಷೆಯನ್ನು ಕೈಬಿಡುವುದಾದರೆ ಇದರ ಬಗೆಗೆ ಭಾಷಾ ತಜ್ಞರು, ಶಿಕ್ಷಣ ತಜ್ಞರು, ಎಲ್ಲ ಭಾಷೆಯ ಸಾಹಿತಿಗಳು ಸೇರಿದಂತೆ ಸಾರ್ವಜನಿಕವಾಗಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.