ಸಿಎಂ ಸೇರಿ ಯಾರೇ ಪ್ರಚಾರಕ್ಕೆ ಬಂದರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ: ವಿಜಯೇಂದ್ರ
ಕಾಂಗ್ರೆಸ್ ಮತಬ್ಯಾಂಕ್ ರಾಜಕೀಯ ಮತ್ತು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ವಿಜಯೇಂದ್ರ ಆರೋಪಿಸಿದರು, ಅಂತಹ ತಂತ್ರಗಳು ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದರು.

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾವುದೇ ಕಾಂಗ್ರೆಸ್ ನಾಯಕರು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದರೂ ಅವರ ಸೋಲು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ವಿಜಯೇಂದ್ರ, ಮತದಾರರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಭ್ರಮನಿರಸನಗೊಂಡಿದ್ದಾರೆ ಮತ್ತು ಸಿಎಂ ಅವರ ತೀವ್ರ ಪ್ರಚಾರವು ಸೋಲಿನ ಭಯವನ್ನು ಪ್ರತಿಬಿಂಬಿಸುತ್ತದೆ , ಬಿಜೆಪಿ ಅಭ್ಯರ್ಥಿಗಳ ಗೆಲವು ಖಚಿತ ಎಂದಿದ್ದಾರೆ.
ಕಾಂಗ್ರೆಸ್ ಮತಬ್ಯಾಂಕ್ ರಾಜಕೀಯ ಮತ್ತು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ವಿಜಯೇಂದ್ರ ಆರೋಪಿಸಿದರು, ಅಂತಹ ತಂತ್ರಗಳು ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಪಾದಿಸಿದರು.
ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳು, ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟದಂತ ಘಟನೆಗಳು ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು. ಈ ವಿಷಯಗಳ ಮೇಲಿನ ಸಾರ್ವಜನಿಕ ಕೋಪ, ಈಡೇರದ ಉದ್ಯೋಗ ಭರವಸೆಗಳು ಮತ್ತು ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮಗಳು ಬಿಜೆಪಿ ಪರವಾಗಿ ಕೆಲಸ ಮಾಡುತ್ತವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಮಾತನಾಡಿ ಕಾಂಗ್ರೆಸ್ ಈಗಾಗಲೇ ಸೋಲನ್ನು ಎದುರಿಸುತ್ತಿದೆ ಎಂದು ಹೇಳಿದ್ದು, ಬಾಗಲಕೋಟೆಯಲ್ಲಿ ಚರಂತಿಮಠ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿ ಗೆಲುವು ಖಚಿತ ಎಂದರು.
ಚರಂತಿಮಠ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಎಂಎಲ್‌ಸಿ ಪಿ.ಎಚ್. ಪೂಜಾರ್ ಹೇಳಿದ್ದು, ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಮತದಾರರನ್ನು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



