ಯಡಿಯೂರಪ್ಪ ಹೆಸರು ಹೇಳಿಕೊಂಡು ರಾಜಕೀಯ ಮಾಡಿದ್ರೂನು ಬಿಜೆಪಿ ಮುಳುಗೋ ಹಡಗು: ಶಿವರಾಜ್ ತಂಗಡಗಿ
ಯಡಿಯೂರಪ್ಪ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಯಡಿಯೂರಪ್ಪ ಇದ್ದಾಗಲೇ ಪಕ್ಷ ಬಹುತ ಪಡೆಯಲು ಸಾಧ್ಯವಿಲ್ಲ. ಈಗ ಬಿಜೆಪಿ ಒಡೆದ ಮನೆಯಾಗಿದ್ದು, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಹೆಸರಿನಲ್ಲಿ ಎಂತಹ ರಾಜಕೀಯ ಮಾಡಿದರೂ ಯಾವುದೇ ಪ್ರಯೋಜನವಿಲ್ಲ, ಬಿಜೆಪಿ ಮುಳುಗುತ್ತಿರುವ ಹಡಗು, ಹಡಗಿನ ತುಂಬಾ ತೂತು ಬಿದ್ದಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಯಡಿಯೂರಪ್ಪ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಯಡಿಯೂರಪ್ಪ ಇದ್ದಾಗಲೇ ಪಕ್ಷ ಬಹುತ ಪಡೆಯಲು ಸಾಧ್ಯವಿಲ್ಲ. ಈಗ ಬಿಜೆಪಿ ಒಡೆದ ಮನೆಯಾಗಿದ್ದು, ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ನಮ್ಮದು ಶಿಸ್ತಿನ ಪಕ್ಷ, ಬಿಜೆಪಿಯಲ್ಲಿರುವಷ್ಟು ನಮ್ಮ ಪಕ್ಷದಲ್ಲಿ ಗೊಂದಲ ಇಲ್ಲ, ಹೀಗಿರುವಾಗ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ ಎಂದು ಶಿವರಾಜ್ ತಂಗಡಗಿ ಪ್ರಶ್ನಿಸಿದ್ದಾರೆ.
ಇನ್ನೂ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಹಲವು ಕಾಂಗ್ರೆಸ್ ಶಾಸಕರು ಮೂರು ಬಾರಿ ಗೆಲುವು ಕಂಡಿದ್ದಾರೆ, ಹೀಗಿರುವಾಗ ಸಚಿವ ಸ್ಥಾನ ಬಯಸುವುದು ಸಹಜ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯಾರಿಗೆ ಏನೇನು ಕೊಡಬೇಕೋ ಅದರಂತೆ ಎಲ್ಲವನ್ನು ಕೊಡುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



