ದಾವಣಗೆರೆ ಉಪ ಚುನಾವಣೆ: ಸಮರ್ಥ್ ಶಾಮನೂರು ಪ್ರಯಾಸದ ಗೆಲುವು; ಕಾಂಗ್ರೆಸ್ ಗೆಲುವಿನ ಅಂತರ ಎಷ್ಟು?
ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.

ದಾವಣಗೆರೆ: ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.
ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 5708 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಬಿಜೆಪಿಯ ಶ್ರೀನಿವಾಸ್ ಅವರು 63,870 ಮತಗಳನ್ನು ಪಡೆದರೆ, ಸಮರ್ಥ್ ಅವರು 69,578 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಅನುಭವಿ ರಾಜಕಾರಣಿ ಶ್ರೀನಿವಾಸ್ ಅವರನ್ನು ರಾಜಕೀಯ ಅನನುಭವಿ ಸಮರ್ಥ್ ಸೋಲಿಸಿದ್ದಾರೆ.
ಇನ್ನು 18,975 ಮತಗಳನ್ನು ಪಡೆದ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರು ಚುನಾವಣೆಯಲ್ಲಿ ಕಾಂಗ್ರೆಸ್ ಆರಾಮದಾಯಕ ಗೆಲುವಿನ ಭರವಸೆಯನ್ನು ಹುಸಿಗೊಳಿಸಿದರು.
ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಿಂದ ಅಫ್ಸರ್ ಹೆಚ್ಚು ಮತಗಳನ್ನು ಗಳಿಸಿದ್ದು, ಕಾಂಗ್ರೆಸ್‌ಗೆ ಕಠಿಣ ಹೋರಾಟ ನೀಡಿದರು.
ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪಾಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



