DMK ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ; ಇಂಡಿಯಾ ಒಕ್ಕೂಟ ಪಕ್ಷಗಳು ಪರಾಮರ್ಶೆ ಮಾಡಿಕೊಳ್ಳಲಿ: ಆರ್.ಅಶೋಕ್
ವಿಜಯ್ ನೇತೃತ್ವದ TVK ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ, ಇಂಡಿಯಾ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.

ಬೆಂಗಳೂರು: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಜೊತೆಗಿನ ಮೈತ್ರಿಯನ್ನು ಮುರಿದು ತಮಿಳಗ ವೆಟ್ರಿ ಕಳಗಂ (TVK) ಜೊತೆ ಕೈಜೋಡಿಸಿರುವ ಕಾಂಗ್ರೆಸ್‌ನ “ನಿಜಸ್ವರೂಪ” ಬಹಿರಂಗವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬುಧವಾರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಎಂಕೆ ಚುನಾವಣೆಯಲ್ಲಿ ಸೋತ ಕೂಡಲೇ ಕಾಂಗ್ರೆಸ್ ವಿಜಯ್ ನೇತೃತ್ವದ TVK ಜೊತೆ ಸೇರಿಕೊಂಡಿದೆ. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ. ಡಿಎಂಕೆ ವಿಶ್ವಾಸಕ್ಕೆ ದ್ರೋಹ ಮಾಡಿದೆ. ಅದಕ್ಕಾಗಿಯೇ ಜನರು ಕಾಂಗ್ರೆಸ್‌ನ್ನು ನಂಬುವುದಿಲ್ಲ ಎಂದು ಕಿಡಿಕಾರಿದರು.
ವಿಜಯ್ ನೇತೃತ್ವದ TVK ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದರಿಂದ, ಇಂಡಿಯಾ ಮೈತ್ರಿಕೂಟದಲ್ಲಿರುವ ಇತರ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಡಿಎಂಕೆಗೆ ಬೆನ್ನಿಗೆ ಚೂರಿ ಹಾಕಿದೆ. ಈಗ ಡಿಎಂಕೆ ಒಂಟಿಯಾಗಿಬಿಟ್ಟಿದೆ. ಗೆಲ್ಲುವ ಕುದುರೆಯ ಬಾಲ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದು ಸ್ಪಷ್ಟವಾಗಿದೆ. INDIA ಮೈತ್ರಿಕೂಟದಲ್ಲಿರುವ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅವರಿಗೆ ಕೂಡ ಇದೇ ರೀತಿಯ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆಯೂ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶಿಸಿದ ಬಳಿಕ ಮುಖ್ಯಮಂತ್ರಿ ಕುರ್ಚಿಯ ಚರ್ಚೆ ನಿಂತಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದರು. ಈಗ ಅವರ ಕನಸು ಭಗ್ನವಾಗಿದೆ” ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



