ರಾಜಕೀಯ

'50 ಕೋಟಿ ರೂ ಖರ್ಚು ಮಾಡುವ ಶಕ್ತಿಯಿಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಗುಡ್ ಬೈ; ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ'

ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.

'50 ಕೋಟಿ ರೂ ಖರ್ಚು ಮಾಡುವ ಶಕ್ತಿಯಿಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಗುಡ್ ಬೈ; ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ'
ಎಚ್.ವಿಶ್ವನಾಥ್
Published On :

ಮೈಸೂರು: ಮುಂಬರುವ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರ ಶಕ್ತಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ಸಹ ರಾಜಕೀಯದಲ್ಲಿ ಮುಂದುವರಿಯುತ್ತೇನೆ, ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಎಚ್ ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ಹಣ ಬೇಕು.

ರಿಯಲ್ ಎಸ್ಟೇಟ್ ನಡೆಸುವವರು ನಿವೇಶನಗಳನ್ನಾದರೂ ಮಾರಾಟ ಮಾಡಿ ಚುನಾವಣೆ ಎದುರಿಸುತ್ತಾರೆ. ನನಗೆ ಒಂದು ಮನೆ ಒಂದು ನಿವೇಶನ ಮಾತ್ರ ಇವೆ. 50 ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ಈಗ ನನ್ನಲ್ಲಿ ಇಲ್ಲ ಎಂದರು.

ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ. ಆದ್ರೆ, ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇ 9ಕ್ಕೆ ಚಿತ್ರದುರ್ಗದಲ್ಲಿ ಆಯೋಜಿಸಿರುವ ಬಿ ಎಸ್ ವೈ ಅಭಿಮಾನೋತ್ಸವಕ್ಕೆ ಎಚ್ ವಿಶ್ವನಾಥ್ ಕಿಡಿಕಾರಿದರು. ಪೋಕ್ಸೋ ಕೇಸ್ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಆದರೂ ಇದೀಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡು ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲ ಗೊತ್ತಿಲ್ಲವೆ ಎಂದು ಎಂಎಲ್‌ ಸಿ ಎಚ್ ವಿಶ್ವನಾಥ್ ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಕೇರಳ ಬಸ್ ನಲ್ಲಿ ಸಿಕ್ಕಿದ್ದ 2 ಕೋಟಿ ಹಣವನ್ನು ಕೊಂಡೊಯ್ದು ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದ್ದಂತಹ ನಟೋರಿಯಸ್ ರಾಮಚಂದ್ರರಾವ್. ಅವರ ಸಾಕು ಮಗಳು ರನ್ಯಾ ರಾವ್ ಚಿನ್ನಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಪರಿಣಾಮ ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿತ್ತು.

ಅಲ್ಲದೇ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಸಹ ಕೇಳಿಬಂದಿತ್ತು. ನ್ಯಾಯ ಕೇಳಲು ಬಂದಿದ್ದ ಮಹಿಳೆಯ ಮೇಲೆ ರಾಮಚಂದ್ರ ರಾವ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ವೀಡಿಯೋ ನನ್ನದಲ್ಲ ಎಂದು ವಾದಿಸಿದ್ದರು.

ಆ ನಂತರ ವಿಧಿವಿಜ್ಞಾನ ಪ್ರಯೋಗಾಲಯದ ನೀಡಿದ ವರದಿಯಲ್ಲಿ ಆ ವೀಡಿಯೋ ರಾಮಚಂದ್ರರಾವ್ ಅವರದ್ದೇ ಎಂಬುದು ಸಾಬಿತಾದ ಕಾರಣ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಏಕಾಏಕಿ ಅವರ ಮೇಲಿನ ಅಮಾನತು ಆದೇಶ ಹಿಂಪಡೆದು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿರುವುದು ಸರಿಯಲ್ಲ‌. ಈ ಸರ್ಕಾರದಲ್ಲಿ ನ್ಯಾಯಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.