ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ; ಬದಲಾವಣೆ ಆಗುತ್ತೆ, ಇಲ್ಲಾ ಅನ್ನೋದನ್ನ ಹೈಕಮಾಂಡ್ ಹೇಳದಿದ್ರೆ ಪಕ್ಷಕ್ಕೆ ಹಾನಿ: KN ರಾಜಣ್ಣ; Video
ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.

ಮೈಸೂರು: ಹೈಕಮಾಂಡ್ ಸಿಎಂಗೆ ಅಧಿಕಾರ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಕೊಡಲಿ, ಇಲ್ಲ ಬದಲಾವಣೆ ಮಾಡ್ತೀವಿ ಅಂತಾದ್ರೂ ಹೇಳಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಸಿಎಂ ಬದಲಾಗುತ್ತಾರೆ ಅಂತಾನೂ ಹೇಳಲ್ಲ, ಇರುತ್ತಾರೆ ಅಂತಾನೂ ಹೇಳಲ್ಲ. ಆದರೆ ಹೈಕಮಾಂಡ್ ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರರು ಅಧಿಕಾರ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಆದರೂ ಕೊಡಲಿ. ಇಲ್ಲ ಬದಲಾವಣೆ ಮಾಡುತ್ತೇವೆ ಎಂಬುದಾದರೂ ಹೇಳಲಿ. ಎರಡು ಬಿಟ್ಟು ಬರಿ ಗೊಂದಲವೇ ಇದ್ರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ ಎಂದಿದ್ದಾರೆ.
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಗೊಂದಲ ಮುಂದುವರೆದರೆ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದರು.
ಸಿಎಂ ಭೇಟಿಯ ಬಳಿಕ ಮಾತನಾಡಿದ ರಾಜಣ್ಣ, 'ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ, ಇರುತ್ತಾರೆ ಎಂದು ಕೂಡ ನಾನು ಹೇಳುವುದಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಅತಿ ಬೇಗ ಮತ್ತು ಜಾಗರೂಕವಾಗಿ ಒಂದು ಗಟ್ಟಿ ನಿರ್ಧಾರ ಕೈಗೊಳ್ಳಲಿ' ಎಂದು ಒತ್ತಾಯಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಆಸೆಯ ಬಗ್ಗೆಯೂ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಆಸೆ ಇರುವುದು ಸಹಜ. ಅವರು ನಮ್ಮ ಪಕ್ಷದ ಅಧ್ಯಕ್ಷರು, ಹೀಗಾಗಿ ಅವರಿಗೆ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ. ಅದು ತಪ್ಪು ಕೂಡ ಅಲ್ಲ' ಎಂದಿದ್ದಾರೆ.
ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ತಡವಾದಷ್ಟು ಅದು ಪಕ್ಷಕ್ಕೆ ಮತ್ತು ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರರು, ಅಧಿಕಾರ ಮುಂದುವರೆಸಿ ಎಂಬ 'ಗ್ರೀನ್ ಸಿಗ್ನಲ್' ಆದರೂ ಕೊಡಲಿ ಅಥವಾ ಬದಲಾವಣೆ ಮಾಡುತ್ತೇವೆ ಎಂಬ ನಿರ್ಧಾರವನ್ನಾದರೂ ಪ್ರಕಟಿಸಲಿ.
ಈ ಎರಡು ಬಿಟ್ಟು ಬರಿ ಗೊಂದಲವೇ ಮುಂದುವರಿದರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ,' ಎಂದು ರಾಜಣ್ಣ ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



