ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ತಡೆ ಸರಿಯಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿಯೂ ಇದೇ ರೀತಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು. ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ.

ಬೆಂಗಳೂರು: ತಮಿಳುನಾಡಿನಲ್ಲಿ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡದೇ ಇರುವ ರಾಜ್ಯಪಾಲರ ನಡೆ ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಟಿವಿಕೆಗೆ ಸರ್ಕಾರ ರಚಿಸಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡಬೇಕು. ಸರ್ಕಾರ ರಚನೆ ತಡೆಯುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿಯೂ ಇದೇ ರೀತಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿತ್ತು. ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲಾಗಿತ್ತು. ಈಗ ಟಿವಿಕೆಗೆ ಆ ಅವಕಾಶ ನಿರಾಕರಿಸುವುದು ತಪ್ಪು ಎಂದು ತಿಳಿಸಿದರು.
ರಾಜ್ಯದ ಜನಾಭಿಪ್ರಾಯಕ್ಕೆ ಗೌರವ ನೀಡಬೇಕು, ಮೊದಲು ಬಹುಮತ ಸಾಬೀತುಪಡಿಸಲು ಅವಕಾಶ ನೀಡಬೇಕು. ಬಹುಮತ ಸಾಬೀತಾಗದಿದ್ದರೆ ಬಳಿಕ ಬೇರೆ ಆಯ್ಕೆಗಳ ಬಗ್ಗೆ ಚರ್ಚಿಸಬಹುದು ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



