ಮೇ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹ್ಮದ್
ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ವಿಶ್ವಾಸ ಇದೆ. ಈ ಕುರಿತು ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ.

ಹುಬ್ಬಳ್ಳಿ/ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮೇ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಶುಕ್ರವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ವಿಶ್ವಾಸ ಇದೆ. ಈ ಕುರಿತು ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ. ಆದರೆ, ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕರನ್ನು ಭೇಟಿಯಾದ ಬಳಿಕ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಇದೇ ವೇಳೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಕುರಿತು ಪ್ರತಿಕ್ರಿಯಿಸಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮತ ಅಂತರ ಕಡಿಮೆಯಾಗಿರುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರನ್ನು ಅಮಾನತು ಮಾಡಲಾಗಿದೆ. ಮತ ಅಂತರ ಕಡಿಮೆಯಾಗಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಜನರು ಬೆಂಬಲ ವ್ಯಕ್ತಪಡಿಸಿರುವುದರಿಂದಲೇ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಈ ಗ್ಯಾರಂಟಿಗಳ ಯಶಸ್ವಿ ಜಾರಿ 2028ರಲ್ಲೂ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಕುರಿತು ಮಾತನಾಡಿ, ಬಿಜೆಪಿ ಮತ್ತು ಚುನಾವಣಾಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಗೆದ್ದ ಅಭ್ಯರ್ಥಿಯನ್ನು ಸೋತವನು ಎಂದು ಘೋಷಿಸಿ, ಸೋತ ಅಭ್ಯರ್ಥಿಯನ್ನು ಗೆದ್ದವನು ಎಂದು ಘೋಷಿಸಿರುವುದು ಬಿಜೆಪಿ ರೂಪಿಸಿದ ಸಂಚು ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



