ಪ್ರಧಾನಿ ಮೋದಿಯನ್ನು ಟೀಕಿಸುವ ಮುನ್ನ ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು: HD ದೇವೇಗೌಡ
ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.

ಹಾಸನ ಜಿಲ್ಲೆ ಮೊಸಳೆಹೊಸಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಕಷ್ಟದಿಂದ ಜಾಗತಿಕ ಆರ್ಥಿಕ ವ್ಯವಸ್ಥೆ ಕುಸಿತದ ಅಂಚಿನಲ್ಲಿರುವ ಈ ಸೂಕ್ಷ್ಮ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ರಾಜತಾಂತ್ರಿಕವಾಗಿ ನಿಭಾಯಿಸುತ್ತಿರುವ ಸಂದರ್ಭದಲ್ಲಿ, ಅವರನ್ನು ಟೀಕಿಸುವ ಮೊದಲು ಸಿದ್ದರಾಮಯ್ಯ ಎರಡು ಬಾರಿ ಯೋಚಿಸಬೇಕು ಎಂದು ಹೇಳಿದರು.
ಮೋದಿ ಅವರ ಹೇಳಿಕೆಗಳನ್ನು ಸಿದ್ದರಾಮಯ್ಯ ಲಘುವಾಗಿ ತೆಗೆದುಕೊಳ್ಳಬಾರದು ಎಂದು ದೇವೇಗೌಡರು ಹೇಳಿದರು.
1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತಾವಧಿಯನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು ಎಂದ ಅವರು, ಆಗ ಇಂದಿರಾ ಗಾಂಧಿ ಜನರಿಗೆ ಒಂದು ದಿನ ಚಹಾ ಸೇವನೆ ಬಿಡಲು, ಊಟವನ್ನು ಕಡಿಮೆ ಮಾಡಲು ಅಥವಾ ದಿನಕ್ಕೆ ಎರಡು ಬಾರಿ ಕುಡಿಯುತ್ತಿದ್ದ ಚಹಾವನ್ನು ಒಂದೇ ಬಾರಿಗೆ ಇಳಿಸಲು ಮನವಿ ಮಾಡಿದ್ದರು ಎಂದು ಹೇಳಿದರು.
ಪ್ರಧಾನಿ ಮೋದಿ ಅವರ ಮಿತವ್ಯಯ ಕ್ರಮಗಳನ್ನು ಸಮರ್ಥಿಸಿಕೊಂಡ ದೇವೇಗೌಡ, ಜವಾಬ್ದಾರಿಯುತ ರಾಜಕಾರಣಿಯಾಗಿ ಸಿದ್ದರಾಮಯ್ಯ ಅವರು ಜಾಗತಿಕ ನಾಯಕನಾಗಿರುವ ಪ್ರಧಾನಿಯನ್ನು ಟೀಕಿಸುವ ಮೊದಲು ಎರಡು ಬಾರಿ ಯೋಚಿಸಬೇಕು. ದಾಖಲೆ 17 ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯ ಅವರು ಪ್ರಧಾನಿ ವಿರುದ್ಧ ಟೀಕೆ ಮಾಡುವ ಮುನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಸನ್- ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಹಾಡಿ ಹೊಗಳಿದ ಎಚ್.ಡಿ ದೇವೇಗೌಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



