ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಸನ್- ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಹಾಡಿ ಹೊಗಳಿದ ಎಚ್.ಡಿ ದೇವೇಗೌಡ
ತಮಿಳುನಾಡಿನಲ್ಲಿ ಡಿಎಂಕೆ, ಎಐಎಡಿಎಂಕೆ, ಮಾಜಿ ಸಿಎಂ ಸ್ಟಾಲಿನ್ ಅವರನ್ನು ಹಿಂದಿಕ್ಕಿ ಹೊಸ ರಾಜಕೀಯ ಶಕ್ತಿ ಉದಯವಾಗಿದೆ. ಸಾಮಾನ್ಯ ನಿರ್ದೇಶಕನ ಮಗ ದೊಡ್ಡ ಮಟ್ಟಕ್ಕೆ ಬೆಳೆದಿದ್ದು, ನೂತನ ಸಿಎಂ ಆಗಿರುವ ವಿಜಯ್ ಅವರನ್ನು ಅಭಿನಂದಿಸುತ್ತೇನೆ,

ಬೆಂಗಳೂರು: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ನಟ, ಜೋಸೆಫ್ ವಿಜಯ್ ಅವರ ಸಾಧನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಡಿ ಹೊಗಳಿದ್ದಾರೆ.
ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯನ್ನು ಮೀರಿಸಿ ಬೆಳೆದಿರುವುದು ಸಾಮಾನ್ಯ ಸುದ್ದಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ವಿಜಯ್ ಎಲ್ಲೇ ಹೋದರೂ 40 ರಿಂದ 50 ಲಕ್ಷ ಜನರು ಸೇರುತ್ತಾರೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಡಿಎಂಕೆ, ಎಐಎಡಿಎಂಕೆ, ಮಾಜಿ ಸಿಎಂ ಸ್ಟಾಲಿನ್ ಅವರನ್ನು ಹಿಂದಿಕ್ಕಿ ಹೊಸ ರಾಜಕೀಯ ಶಕ್ತಿ ಉದಯವಾಗಿದೆ. ಸಾಮಾನ್ಯ ನಿರ್ದೇಶಕನ ಮಗ ದೊಡ್ಡ ಮಟ್ಟಕ್ಕೆ ಬೆಳೆದಿದ್ದು, ನೂತನ ಸಿಎಂ ಆಗಿರುವ ವಿಜಯ್ ಅವರನ್ನು ಅಭಿನಂದಿಸುತ್ತೇನೆ ಎಂದು ದೇವೇಗೌಡರು ಹೇಳಿದರು.
ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಈ ಎತ್ತರಕ್ಕೆ ಬೆಳೆದಿರುವುದು ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿ ಎಂದು ಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕದ ನಡುವೆ ಹಲವು ಸಮಸ್ಯೆಗಳಿವೆ (ಕಾವೇರಿ ವಿಚಾರ). ವಿಜಯ್ ಅವರೊಂದಿಗೆ ಕುಳಿತು ಮಾತನಾಡುವ ಮೂಲಕ ಆ ಸಮಸ್ಯೆಗಳನ್ನು ಬಗೆಹರಿಸುವ ಕಾಲ ಬರಬಹುದು ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



