ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್
ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಇಂದು ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇವುಗಳ ಮಧ್ಯೆ ಸಮಾವೇಶಕ್ಕೆ ಮುನ್ನ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರು ಇಂದು ಸಭೆ ನಡೆಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿವೆ.
ಬ್ರೇಕ್ ಫಾಸ್ಟ್ ಮೀಟಿಂಗ್
ತುಮಕೂರು ಸಮಾವೇಶಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಆಪ್ತ ಸಚಿವರಾದ ಹೆಚ್ ಸಿ ಮಹದೇವಪ್ಪ, ಜಮೀರ್ ಅಹಮದ್, ಕೆ ವೆಂಕಟೇಶ್ ಮಹತ್ವದ ಸಭೆ ನಡೆಸಿದ್ದು, ಪ್ರಸಕ್ತ ಕಾಂಗ್ರೆಸ್ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ತುಮಕೂರಿನಲ್ಲಿ ಸಾಧನಾ ಸಮಾವೇಶ
ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



