ರಾಜಕೀಯ

ಬಿಜೆಪಿ ವರಿಷ್ಠ ಯಡಿಯೂರಪ್ಪ ನಿವಾಸದಲ್ಲಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್ ಮೀಟಿಂಗ್; ಯಾರೆಲ್ಲಾ ಭಾಗವಹಿಸಿದ್ದರು? Video

ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು.

ಬಿಜೆಪಿ ವರಿಷ್ಠ ಯಡಿಯೂರಪ್ಪ ನಿವಾಸದಲ್ಲಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್ ಮೀಟಿಂಗ್; ಯಾರೆಲ್ಲಾ ಭಾಗವಹಿಸಿದ್ದರು? Video
Published On :

ಬೆಂಗಳೂರು: ಮೂರು ದಿನಗಳ ಭೇಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ನಿತಿನ್ ನಬಿನ್ ಅವರು ಇಂದು ಬೆಳಗ್ಗೆ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಉಪಾಹಾರ ಸವಿದರು.

ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು. ಅವರ ಭೇಟಿಯನ್ನು ಅತ್ಯಂತ ಸರಳವಾಗಿ ಇರಿಸಲಾಗಿದ್ದು, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಮತ್ತು 2028ರ ಚುನಾವಣೆಯ ಮೆಗಾ ಪ್ಲಾನ್ ಸಿದ್ಧತೆಯೆಂದು ಬಣ್ಣಿಸಲಾಗುತ್ತಿದೆ.

ಇಂದು ಬೆಳಗ್ಗೆ ನೇರವಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ನಿತಿನ್ ನಬಿನ್ ಅವರಿಗೆ ಸ್ವಾಗತ ಕೋರಿ ಚಹಾ-ಕಾಫಿ ವ್ಯವಸ್ಥೆ ಮಾಡಲಾಯಿತು. ದೋಸೆ, ಪೊಂಗಲ್, ಉಪ್ಪಿಟ್ಟು ಉಪಾಹಾರಕ್ಕೆ ಇದ್ದವು. ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರೆಲ್ಲರೂ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಾಜರಿದ್ದರು. ಶಾಸಕರು ಮತ್ತು ಸಂಸದರಿಗೆ ಮಾತ್ರ ಬಿ ಎಸ್ ವೈ ನಿವಾಸದೊಳಗೆ ಭೇಟಿಗೆ ಅವಕಾಶ ನೀಡಲಾಗಿತ್ತು.

ಇಂದು ಅಪಹಾಹ್ನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.