CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ
ಇಂದು ರಾತ್ರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ ಹಾಗೂ ಸಚಿವ ಬೈರತಿ ಬಸವರಾಜ್ ಅವರೊಂದಿಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳುತ್ತಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲಕ್ಕೆ ಮುಂದಿನ ಎರಡು ಮೂರು ದಿನಗಳಲ್ಲಿ ಸಾಧ್ಯತೆ ಇದ್ದು, ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆದಿದೆ.
ಇಂದು ರಾತ್ರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ ಹಾಗೂ ಸಚಿವ ಬೈರತಿ ಬಸವರಾಜ್ ಅವರೊಂದಿಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೌದು, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆಗಳ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಈ ಬಗ್ಗೆ ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಖಾತೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಅವರ ಖಾತೆಯನ್ನು ಕೆ.ವೆಂಕಟೇಶ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಇನ್ನು ಕೆ.ಎನ್.ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಮತ್ತು ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಯುವ ಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರು ಯಾರಿಗೂ ಹಂಚಿಕೆ ಮಾಡದೆ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



