ರಾಜಕೀಯ

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ ಪಾಟೀಲ್

ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ ಪಾಟೀಲ್
ಎಚ್.ಕೆ.ಪಾಟೀಲ್
Published On :

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

ಇನ್ನು ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸುದ್ದಿ ಕೇಳಿ ಅವರ ಆಪ್ತ ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ವಿಚಾರವಾಗಿ ಕೇಳಿದರೆ ಸಿದ್ದರಾಮಯ್ಯ ಅವರು ಮೌನ ವಹಿಸಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.

ಇಂದು ಸಿಎಂ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಪಾಟೀಲ್ ಅವರು, ಮಾಧ್ಯಮಗಳಲ್ಲಿ ಸುದ್ದಿ ಬಂದಿದೆ ಎಂದು ನಾವು ನಮ್ಮ ಕಳವಳ ವ್ಯಕ್ತಪಡಿಸಿದ್ದೇವೆ. ಆದರೆ, ಸಿಎಂ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು ಎಂದು ತಿಳಿಸಿದ್ದಾರೆ.

ನಿನ್ನೆ ದೆಹಲಿಯ ಇಂದಿರಾ ಭವನದಲ್ಲಿ ನಡೆದ ಹೈವೋಲ್ಟೇಜ್ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದ್ದು, ಈ ವೇಳೆ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.