ರಾಜಕೀಯ

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!
ಪ್ರಲ್ಹಾದ ಜೋಶಿ
Published On :

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಿಂದುಳಿದ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ" ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ಅಪ್ಪ ರಾಜೀವ್ ಗಾಂಧಿ ಅಂದು ವೀರೇಂದ್ರ ಪಾಟೀಲರನ್ನು ನಡೆಸಿಕೊಂಡಂತೆ ಮಗ ರಾಹುಲ್ ಗಾಂಧಿ ಇಂದು ಸಿದ್ದರಾಮಯ್ಯ ಅವರನ್ನು ನಡೆಸಿಕೊಂಡಿದ್ದಾರೆ. ರಾಜೀವ್ ಗಾಂಧಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಪಮಾನಿಸಿದರು. ಅಂತೆಯೇ ಮಗ ರಾಹುಲ್ ಗಾಂಧಿ ಸಹ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಅವಮಾನಿಸಿದ್ದಾರೆ ಎಂದರು.

ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ: ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ, ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದು ದೂರಿದರು.

ಅರಾಜಕತೆ-ಅಸ್ಥಿರತೆಯೇ ಕಾಂಗ್ರೆಸ್ ಗ್ಯಾರೆಂಟಿ: ಅರಾಜಕತೆ, ಅಸ್ಥಿರತೆ, ಅವಿಶ್ವಾಸ, ಗೊಂದಲದ ವಾತಾವರಣವೇ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ. ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆಂತರಿಕ ಗೊಂದಲ, ಅರಾಜಕತೆ, ಅಸ್ಥಿರತೆ ಪರಾಕಾಷ್ಠೆ ತಲೆದೋರಿದೆ. ಕಾಂಗ್ರೆಸ್ ಒಂದು ಅರಾಜಕತೆಯ ಪಕ್ಷ ಎಂದು ಆರೋಪಿಸಿದರು.

ರಾಜ್ಯದ ಆರ್ಥಿಕತೆ ಹದಗೆಡಿಸಿ, ಹೈ ಕಮಾಂಡ್ ಗೆ ATM ಆಗಿದ್ರು: ಸಿದ್ದರಾಮಯ್ಯ ಅವರು ವಿದಾಯ ಭಾಷಣದಲ್ಲಿ ರಾಜ್ಯದ ಸಂಪತ್ತು ‌ಬರಿದಾಗಿದ್ದನ್ನು ಪ್ರಸ್ತಾಪಿಸುತ್ತ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದು ಸರಿಯಲ್ಲ. ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳು ಮತ್ತು ಹೈಕಮಾಂಡ್ ಅನ್ನು ತೃಪ್ತಿಪಡಿಸಲು ಹೋಗಿ ರಾಜ್ಯದ ಆರ್ಥಿಕತೆಯನ್ನು ಹದಗೆಡಿಸಿದರು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಬಹುತೇಕ ವಸ್ತುಗಳ ಬೆಲೆ ಏರಿಸಿ ಆರ್ಥಿಕತೆಯನ್ನು ತೂಗಿಸಲು ಸರ್ಕಸ್ ಮಾಡಿದ ಸಿದ್ದರಾಮಯ್ಯ ಅವರು, ಅಭಾವವಿಲ್ಲದ ಸಮಯದಲ್ಲೂ ಮೂರು ಬಾರಿ ಇಂಧನದ ಬೆಲೆ ಏರಿಸಿ ಜನಜೀವನ ದುಬಾರಿ ಮಾಡಿದರೆ, ಕಾಂಗ್ರೆಡ್ ಹೈ ಕಮಾಂಡ್, ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನು ATM ರೀತಿ ಬಳಸಿಕೊಂಡಿತು ಎಂದು ದೂರಿದರು.

ವಿಬಿಜಿ ರಾಮ್ ಜಿ, ಜಲಜೀವನ ಮಿಷನ್, 15ನೇ ಹಣಕಾಸು ಆರ್ಥಿಕ ನೆರವು, ಜಿ ಎಸ್ ಟಿ ಸೇರಿದಂತೆ ಕೇಂದ್ರ ಸರ್ಕಾರದ ಆರ್ಥಿಕ ನೆರವುಗಳ ಬಗ್ಗೆ ಕೂಲಕುಂಶ ಮಾಹಿತಿ ನೀಡಿದ್ದಲ್ಲದೆ, ಹಣ ಬಿಡುಗಡೆ ಆಗಿರುವ ಬಗ್ಗೆ ಹಲವು ಬಾರಿ ಕೇಂದ್ರ ಸ್ಪಷ್ಟಪಡಿಸಿದೆ. ಹಾಗಿದ್ದರೂ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.