ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಹಿಂದೂ ವಿರೋಧಿ ಸಿಎಂಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡ್ರು: ಛಲವಾದಿ ವ್ಯಂಗ್ಯ
ಹಿಂದುತ್ವವನ್ನು ವಿರೋಧಿಸುತ್ತಿದ್ದ ನಾಲ್ವರು ಮುಖ್ಯಮಂತ್ರಿಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಹಿಂದುತ್ವವನ್ನು ವಿರೋಧಿಸುತ್ತಿದ್ದ ನಾಲ್ವರು ಮುಖ್ಯಮಂತ್ರಿಗಳು ಒಂದೇ ತಿಂಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆ ಜಾಗಕ್ಕೆ ಡಿಕೆ ಶಿವಕುಮಾರ್ ಬರುತ್ತಿದ್ದಾರೆ. ಇಲ್ಲಿ ವ್ಯಕ್ತಿ ಬದಲಾಗಿದ್ದಾರೆ. ಆದರೆ ವ್ಯವಸ್ಥೆ ಬದಲಾಗಲ್ಲ ಎಂದರು.
ಕಳೆದ ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಡಿಎಂಕೆ ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಪತನಗೊಂಡಿತ್ತು. ಇನ್ನು ಮಮತಾ ಬ್ಯಾನರ್ಜಿ ಹಾಗೂ ಎಂಕೆ ಸ್ಟಾಲಿನ್ ಹೀನಾಯವಾಗಿ ಸೋಲು ಕಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



