ಸಿದ್ದರಾಮಯ್ಯ ರಾಜೀನಾಮೆ ಬಳಿಕ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋದ ಡಿ.ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್; Video
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ದೆಹಲಿಯಲ್ಲಿ ಪತ್ರಕರ್ತರು ಪ್ರಶ್ನೆ ಮಾಡಿದರು ‘ನೀವೇ ಮುಂದಿನ ಮುಖ್ಯಮಂತ್ರಿ ಆಗುತ್ತೀರಾ ಸರ್’ ಎಂದು ಪ್ರಶ್ನೆ ಕೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಪ್ರತ್ಯೇಕವಾಗಿ ವಿಶೇಷ ವಿಮಾನದ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ದೆಹಲಿಯಲ್ಲಿ ಪತ್ರಕರ್ತರು ಪ್ರಶ್ನೆ ಮಾಡಿದರು ‘ನೀವೇ ಮುಂದಿನ ಮುಖ್ಯಮಂತ್ರಿ ಆಗುತ್ತೀರಾ ಸರ್’ ಎಂದು ಪ್ರಶ್ನೆ ಕೇಳಿದರು. ಅದಕ್ಕೆ ಉತ್ತರಿಸಿದ ಡಿ ಕೆ ಶಿವಕುಮಾರ್, ಸದ್ಯಕ್ಕೆ ಹವಾಮಾನ ಸ್ವಲ್ಪ ತೊಂದರೆ ಕೊಡುತ್ತಿದೆ.
ನಮ್ಮ ಸಿಎಂ ಸಿದ್ದರಾಮಯ್ಯ ಅವರು ಜೈಪುರದಲ್ಲಿ ಲ್ಯಾಂಡ್ ಆಗಿದ್ದಾರೆ. ಹವಾಮಾನದಲ್ಲಿ ಬಹಳಷ್ಟು ಪ್ರಕ್ಷುಬ್ಧತೆ ಇದೆ, ನಾವು ಅದನ್ನು ಮೊದಲು ನೋಡಬೇಕು’ ಎಂದು ಹೇಳಿದ್ದಾರೆ. ಆದರೆ, ಸಿಎಂ ವಿಚಾರವಾಗಿ ತುಟಿಪಿಟಿಕ್ ಅನ್ನಲಿಲ್ಲ. ಮತ್ತೊಂದೆಡೆ, ಸಿದ್ದರಾಮಯ್ಯ ಸುರಕ್ಷಿತವಾಗಿ ದೆಹಲಿ ತಲುಪಿದ್ದಾರೆ.
ನಿನ್ನೆ ಅಪರಾಹ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾರ್ಗ ಮಧ್ಯೆಯೇ ಜೈಪುರಕ್ಕೆ ತೆರಳಿದರು. ನಂತರ ದೆಹಲಿಗೆ ಪ್ರಯಾಣ ಬೆಳೆಸಿ ಇಂದು ಬೆಳಗ್ಗೆ 10 ಜನ್ ಪತ್ ನಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಹೋಗಿದ್ದಾರೆ.
‘ಸದ್ಯಕ್ಕೆ ಸಿಎಂ ವಿಚಾರವಾಗಿ ಯಾವುದೇ ಹೇಳಿಕೆಗಳನ್ನು ನೀಡಬಾರದು. ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ ಶುರುವಾಗುವುದರಿಂದ ಅತ್ಯಂತ ಜಾಗರೂಕರಾಗಿ ಇರಬೇಕು. ಈಗ ಏನೇ ಹೇಳಿಕೆ ನೀಡಿದರೂ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಬಹುದು’ ಎಂದು ಡಿಕೆಶಿಗೆ ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದ್ದರು. ಆ ಕಾರಣದಿದಲೋ ಏನೋ ಅವರು ಸಿಎಂ ಬದಲಾವಣೆ ವಿಚಾರವಾಗಿ ಯಾವುದೇ ಹೇಳಿಕೆ ನೀಡುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



