'ದೇವರು ಅವಕಾಶ ಮಾತ್ರ ಕೊಡುತ್ತಾನೆ, ಅದರಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ನಮ್ಮ ಸಿದ್ದರಾಮಯ್ಯನವರು': ಡಿ.ಕೆ ಶಿವಕುಮಾರ್
ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ.ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ.

ಬೆಂಗಳೂರು: ಸಿಎಂ ಪಟ್ಟದಿಂದ ನಿರ್ಗಮಿಸಿದ, ಈ ರಾಜ್ಯ ಕಂಡ ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರಶಂಸೆಯ ನುಡಿಗಳನ್ನು ಭಾವೀ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ. ಭಾರತ ರಾಜಕಾರಣದ ಧೀಮಂತ ನಾಯಕ ಎಂದು ಹೊಗಳಿದ್ದಾರೆ.
ಡಿ ಕೆ ಶಿವಕುಮಾರ್ ಅವರು ಭಾನುವಾರ ಅಥವಾ ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾವ ನಾಯಕರಿಗೆ ಯಾವ ಖಾತೆಗಳು ಹಂಚಿಕೆಯಾಗಲಿವೆ ಎಂಬ ಕುತೂಹಲವಿದೆ.
ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



