ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ
ಸಿದ್ದರಾಮಯ್ಯ, ಥಾವರ್ ಚಂದ್ ಗೆಹ್ಲೊಟ್
Published On :

ನಿನ್ನೆ ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ.ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಮುಂದಿನ ವ್ಯವಸ್ಥೆಯವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. 

ಕರ್ನಾಟಕ ರಾಜಕೀಯ ನಾಟಕೀಯ ತಿರುವು ಪಡೆದುಕೊಂಡಿದ್ದು, ಸೂಕ್ಷ್ಮವಾಗಿ ನಿರ್ವಹಿಸಲಾದ ಅಧಿಕಾರ ವರ್ಗಾವಣೆಯ ಭಾಗವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಗುರುವಾರ ತಮ್ಮ ಉತ್ತರಾಧಿಕಾರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಘೋಷಿಸಿ, ಬಳಿಕ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಅವರ ಎರಡನೇ ಅವಧಿಯ ಸಿಎಂ ಆಡಳಿತಕ್ಕೆ ತೆರೆ ಬಿದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.