ರಾಜಕೀಯ

CM ಬದಲಾವಣೆ ಆಯಿತು, ಈಗ BJP ರಾಜ್ಯಾಧ್ಯಕ್ಷರು ಕೆಳಗಿಳಿಯುತ್ತಾರೆ; ಮಹಿಳೆಗೆ ನಾಯಕತ್ವ: ಖ್ಯಾತ ಜ್ಯೋತಿಷಿ ಭವಿಷ್ಯ!

ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ಈ ಬಾರಿ ಮಹಿಳೆಯೊಬ್ಬರಿಗೆ ಪಕ್ಷದ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.

CM ಬದಲಾವಣೆ ಆಯಿತು, ಈಗ BJP ರಾಜ್ಯಾಧ್ಯಕ್ಷರು ಕೆಳಗಿಳಿಯುತ್ತಾರೆ; ಮಹಿಳೆಗೆ ನಾಯಕತ್ವ: ಖ್ಯಾತ ಜ್ಯೋತಿಷಿ ಭವಿಷ್ಯ!
ಬಿ ವೈ ವಿಜಯೇಂದ್ರ
Published On :

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ.

ಹೌದು, ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ಈ ಬಾರಿ ಮಹಿಳೆಯೊಬ್ಬರಿಗೆ ಪಕ್ಷದ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಖ್ಯಾತ ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ.

ಬಿವೈ ವಿಜಯೇಂದ್ರ ಅವರ ಪದತ್ಯಾಗವಾಗಲಿದೆ. ಅವರ ಸ್ಥಾನಕ್ಕೆ ಮಹಿಳಾ ನಾಯಕಿ ಬರಲಿದ್ದಾರೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಶಾಂತ್ ಕಿಣಿ, "ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಕೆಳಗಿಳಿಯಲಿದ್ದಾರೆ. ಅವರ ಸ್ಥಾನಕ್ಕೆ ಒಬ್ಬ ಮಹಿಳೆ ನೇಮಕವಾಗಲಿದ್ದಾರೆ! " ಎಂದು ಬರೆದುಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. "ಒಬ್ಬ ಮಹಿಳೆ ಕರ್ನಾಟಕ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ" ಎಂಬುದು ಅವರ ಭವಿಷ್ಯದ ಸಾರಾಂಶ.

ಪ್ರಶಾಂತ್ ಕಿಣಿ ಅವರ ಭವಿಷ್ಯದ ಪ್ರಕಾರ, ಪ್ರಸ್ತುತ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರು ಶೀಘ್ರದಲ್ಲೇ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಯಾರು ಆ ಮಹಿಳೆ?

ಪ್ರಶಾಂತ್ ಕಿಣಿ ಅವರು ಯಾವುದೇ ನಿರ್ದಿಷ್ಟ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೆ, ಈ ಭವಿಷ್ಯದ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಥವಾ ಇತರ ಪ್ರಮುಖ ಮಹಿಳಾ ನಾಯಕಿಯರ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿವೆ.

ಇದು ಕೇವಲ ಜ್ಯೋತಿಷಿಯೊಬ್ಬರ ಭವಿಷ್ಯವಾಣಿಯಾಗಿದ್ದು, ಬಿಜೆಪಿ ಹೈಕಮಾಂಡ್‌ನಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ಸುಳಿವು ಹೊರಬಿದ್ದಿಲ್ಲ. ರಾಜಕೀಯದಲ್ಲಿ ಬದಲಾವಣೆಗಳು ಯಾವಾಗ ಬೇಕಾದರೂ ಆಗಬಹುದು, ಆದರೆ ಸದ್ಯಕ್ಕೆ ವಿಜಯೇಂದ್ರ ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.