ಸಂಪುಟ ರಚನೆ ಕಸರತ್ತು: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್, ಹಂಗಾಮಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ
ಸಿಎಲ್‌ಪಿ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಸಾಲು ಸಾಲು ನಾಯಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುತ್ತಿದ್ದು, ಡಿ.ಕೆ ಶಿವಕುಮಾರ್ ಅವರು ನಾಳೆಯೇ ದೆಹಲಿಗೆ ಹಾರಲಿದ್ದಾರೆ.

ನವದೆಹಲಿ: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಸೋಮವಾರ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿ, ತಮ್ಮ ಸಂಪುಟ ಸೇರುವ ಶಾಸಕರ ಬಗ್ಗೆ ಮತ್ತು ರಾಜ್ಯದ ಇತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ಜೂನ್ 3 ರಂದು ತಮ್ಮೊಂದಿಗೆ ಎಷ್ಟು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಿದ್ದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸಿಎಲ್‌ಪಿ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಸಾಲು ಸಾಲು ನಾಯಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುತ್ತಿದ್ದು, ಡಿಕೆ ಶಿವಕುಮಾರ್ ಅವರು ನಾಳೆಯೇ ದೆಹಲಿಗೆ ಹಾರಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮ ಹಾಗೂ ಸಚಿವರ ಹೆಸರು ಫೈನಲ್ ಮಾಡಲು ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಸಚಿವ ಸಂಪುಟ ಕುರಿತು ಚರ್ಚಿಸಲಿರುವ ಡಿಕೆ ಶಿವಕುಮಾರ್ ತಮ್ಮ ಜೊತೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕು. ಮುಂದಿನ ಪ್ರಕ್ರಿಯೆ ಸೇರಿ ಹಲವು ವಿಚಾರದ ಬಗ್ಗೆ ಚರ್ಚಿಸಲಿದ್ದಾರೆ.
ಇನ್ನು ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು ಸಹ ನಾಳೆ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.
ತಮ್ಮ ಆಪ್ತರಿಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಅವರು, ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



