ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ BiggBoss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!
ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಜಾಹ್ನವಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅವರಿಗೆ ಜೆಡಿಎಸ್ ನಲ್ಲಿ ಮಹತ್ವದ ಹುದ್ದೆ ನೀಡಲಾಗಿದೆ. ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಮೇ 2024ರಲ್ಲಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲೇ ಜಾನ್ಹವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಜಾಹ್ನವಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ.
ಅಲ್ಲದೆ, ತಮಗೆ ಈ ಜವಾಬ್ದಾರಿ ನೀಡಿದ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಯುವ ಘಟಕದ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಗ್ರೇಟರ್ ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಆರಂಭದಲ್ಲಿ ಟಿವಿ ಆಂಕರ್ ಆಗಿ ವಿವಿಧ ಚಾನೆಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದ ಜಾಹ್ನವಿ ಬಳಿಕಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಕಳೆದ ವರ್ಷ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದರು.
ಬಿಡದಿ ಟೌನ್ ಶಿಪ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿ, ಯುವ ಹೋರಾಟಗಾರ್ತಿಯಾಗಿ ಕಾಣಿಸಿಕೊಳ್ಳುವ ಮೂಲಕ ಹೊಸ ಭರವಸೆ ಮೂಡಿಸಿದ್ದಾರೆ. ಬಿಡದಿ ಪಾದಯಾತ್ರೆಯಲ್ಲಿ ಗಮನ ಸೆಳೆದಿದ್ದರು.
ಬೈರಮಂಗಲದ ಫಲವತ್ತಾದ ರೈತರ 9500 ಎಕರೆ ಜಮೀನನ್ನು ಸರ್ಕಾರ ಪಡೆದು ರೈತರ ವಿರೋದದ ನಡುವೆ ಗ್ರೆಟರ್ ಬೆಂಗಳೂರು ಮಾಡಲು ಹೋರಟಿರುವ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ಪ್ರಸ್ತಾಪಿಸುವ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ನೇರವಾಗಿಯೇ ಟಾಂಗ್ ಕೊಡುತ್ತಾ, ಪಕ್ಷದ ಯುವ ನಾಯಕಿಯಾಗಿ ರೂಪುಗೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



