ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ನಾಳೆಯೇ ಕರುಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ಬುಧವಾರ ಹೇಳಿದ್ದಾರೆ.

ಚಿಕ್ಕಮಗಳೂರು: ಹಲವು ವರ್ಷಗಳಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ.
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ನಾಳೆಯೇ ಕರುಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ಬುಧವಾರ ಹೇಳಿದ್ದಾರೆ.
ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯೊಳಗೆ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ನಾಳೆ ಕರುಡು ಮೀಸಲಾತಿ ಬಿಡುಗಡೆ ಮಾಡುತ್ತೇವೆ. 10 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಡಿಸೆಂಬರ್ ನಿಂದ ಜನವರಿ 15 ರೊಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆ ಮುಗಿಸುತ್ತೇವೆ. ನಮ್ಮ ಇಲಾಖೆಯಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಈಶ್ವರ್ ಖಂಡ್ರೆ ಅವರು ಸ್ಪಷ್ಟಪಡಿಸಿದ್ದಾರೆ.
ವರ್ಷಾಂತ್ಯದೊಳಗೆ ಈ ಚುನಾವಣೆ ಖಚಿತವಾಗಿ ನಡೆಯುತ್ತದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಮತದಾರರ ಪಟ್ಟಿಯನ್ನು ನೀಡಲು ಕೇಂದ್ರ ಚುನಾವಣಾ ಆಯೋಗ ವಿಳಂಬ ಮಾಡಿದರೆ, ಜನವರಿ ತಿಂಗಳಲ್ಲಿ ಚುನಾವಣೆ ಆಗಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



