CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ
ಡಿಕೆ ಶಿವಕುಮಾರ್ ಅವರು ಈಗ ತಮ್ಮ ಹಳೆ ಕಸಬು ಮತ್ತೆ ಶುರು ಮಾಡಿದ್ದು, ತಮ್ಮ ಸಚಿವರನ್ನು ನಿಯಂತ್ರಿಸಲು ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ತಮ್ಮ ಸರ್ಕಾರದ ಪ್ರಭಾವಿ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮುಖಾಂತರ ರಹಸ್ಯ ಕಾರ್ಯಚರಣೆ ನಡೆಸಲು ವಿಪಕ್ಷಗಳು ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಗೆ ನೀಡಿದ ವಿಚಾರವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಅವರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕವೇ ಮುಖ್ಯಮಂತ್ರಿಯಾದರು ಎಂದು ಕೆಲ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಡಿಕೆ ಶಿವಕುಮಾರ್ ಅವರು ಈಗ ತಮ್ಮ ಹಳೆ ಕಸಬು ಮತ್ತೆ ಶುರು ಮಾಡಿದ್ದು, ತಮ್ಮ ಸಚಿವರನ್ನು ನಿಯಂತ್ರಿಸಲು ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು, ಎರಡು ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರ ಚಲನವಲನದ ಮೇಲೆ ತೀವ್ರ ನಿಗಾ ಇಡಲಾಗಿದೆ, ಖಾಸಗಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಸಚಿವರು ಹುಷಾರಾಗಿರುವಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



