ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು? ಅವರನ್ನು ರಾಜಕೀಯವಾಗಿ ಮುಗಿಸಲು ಪ್ಲ್ಯಾನ್ ಮಾಡಿದ್ಯಾರು? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಭಾರೀ ಸದ್ದು ಮಾಡುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ಒಬ್ಬ ಸಿಎಂ ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು? ಅವರನ್ನು ರಾಜಕೀಯವಾಗಿ ಮುಗಿಸಲು ಪ್ಲ್ಯಾನ್ ಮಾಡಿದ್ಯಾರು? ಎಂದು ಪ್ರಶ್ನಿಸಿದ್ದಾರೆ.
ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಚಲವಾದಿ ನಾರಾಯಣಸ್ವಾಮಿ, ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯ ಮುಗಿಸಲು ಯತ್ನಿಸಿದ್ದು ಯಾರು ಎಂದು ಪ್ರಶ್ನಿಸಿದರು.
"ರಾಜ್ಯದ ಮುಖ್ಯಮಂತ್ರಿಯಾದವರು ಇಂತಹ ಕೀಳು ಮಟ್ಟದ ರಾಜಕೀಯಕ್ಕೆ ಇಳಿಯಬಾರದಿತ್ತು. ಸ್ವತಃ ಸಚಿವರು ಮತ್ತು ಶಾಸಕರ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿಸುವ ಹಂತಕ್ಕೆ ಸರ್ಕಾರ ತಲುಪಿರುವುದು ಶೋಚನೀಯ" ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದ ಅವರು, "ಸ್ಟಿಂಗ್ ಆಪರೇಷನ್ ಫ್ಯಾಕ್ಟರಿಯನ್ನೇ ಇಟ್ಟುಕೊಂಡಿರುವವರಿಗೆ ಯಾರೋ ಸ್ಟಿಂಗ್ ಮಾಡಿದ್ದರೆ. ಹಾಗಿದ್ದರೆ ಅವರು ಎಂಥವರು ಇರಬೇಡ? ತಮ್ಮ ಮೇಲಿನ ತಪ್ಪುಗಳನ್ನು ಮುಚ್ಚಿಕೊಳ್ಳಲು ಇತರರ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಇಂತಹ ಹೀನ ತಂತ್ರಗಳನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ" ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



