ರಾಜಕೀಯ

ಪಿತೃಪಕ್ಷದ ಬಳಿಕ ಸಕ್ರಿಯ ರಾಜಕಾರಣಕ್ಕೆ ವಾಪಸ್: JDS ವರಿಷ್ಠ ಎಚ್‌.ಡಿ. ದೇವೇಗೌಡ

ನೈಸ್ ಯೋಜನೆ ಕುರಿತು ಕಾಂಗ್ರೆಸ್ ಸೇರಿದಂತೆ ಹಲವು ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇದೆ. ನೈಸ್ ಯೋಜನೆ ತಮ್ಮ ಕೊಡುಗೆ ಎಂದು ಕೆಲ ನಾಯಕರು ಆರೋಪಿಸುತ್ತಿರುವುದು ದುರದೃಷ್ಟಕರ.

ಪಿತೃಪಕ್ಷದ ಬಳಿಕ ಸಕ್ರಿಯ ರಾಜಕಾರಣಕ್ಕೆ ವಾಪಸ್: JDS ವರಿಷ್ಠ ಎಚ್‌.ಡಿ. ದೇವೇಗೌಡ
ಎಚ್‌.ಡಿ ದೇವೇಗೌಡ — Express / Shashidhar Byrappa
Published On :

ಹಾಸನ: ಪಿತೃಪಕ್ಷದ ಬಳಿಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕಿಡ್ನಿ ವೈಫಲ್ಯಗೊಂಡಿದ್ದು, ನಿಯಮಿತವಾಗಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದೇನೆ. ಕಿಡ್ನಿಗೆ ಸಮಸ್ಯೆಯಾಗಿರಬಹುದು, ಆದರೆ, ನನ್ನ ನೆನಪಿನ ಶಕ್ತಿ ಉತ್ತಮವಾಗಿದೆ. ಯಾವುದೇ ಸಂದರ್ಭದಲ್ಲೂ ರಾಜಕೀಯ ಇತಿಹಾಸವನ್ನು ವಿವರಿಸುವ ಸಾಮರ್ಥ್ಯ ಹೊಂದಿದ್ದೇನೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಸ್ವಂತ ಜಿಲ್ಲೆಗೆ ಮಾತ್ರ ಸೀಮಿತವಾಗದೆ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.

ನೈಸ್ ಯೋಜನೆ ಕುರಿತು ಕಾಂಗ್ರೆಸ್ ಸೇರಿದಂತೆ ಹಲವು ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ತಮಗೆ ಸಂಪೂರ್ಣ ಮಾಹಿತಿ ಇದೆ. ನೈಸ್ ಯೋಜನೆ ತಮ್ಮ ಕೊಡುಗೆ ಎಂದು ಕೆಲ ನಾಯಕರು ಆರೋಪಿಸುತ್ತಿರುವುದು ದುರದೃಷ್ಟಕರ. ಆದರೆ, ವಾಸ್ತವಾಂಶಗಳು ಬೇರೆಯೇ ಇವೆ ಎಂದು ತಿಳಿಸಿದರು.

ದೆಹಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಹಾಗೂ ಎಸ್‌ಐಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಭಾರತದ ಚುನಾವಣಾ ಆಯೋಗವನ್ನು ದೂಷಿಸುವ ಬದಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಕಾದು ನೋಡೋಣ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.