ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವಿನ ಹೊಂದಾಣಿಕೆಯನ್ನು ಸುಧಾರಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಭರ್ಜರಿ ಸಿದ್ಧತೆ ಆರಂಭಿಸಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಪಕ್ಷಗಳ ತಳಮಟ್ಟದ ಸಮನ್ವಯತೆ ಹಾಗೂ ಸಾಂಸ್ಥಿಕ ಸಿದ್ಧತೆಯನ್ನು ಪರಿಶೀಲಿಸಲು ಜಿಲ್ಲಾವಾರು ಸಮಾಲೋಚನಾ ಸಭೆಗಳಿಗೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರೊಂದಿಗೆ ಮೊದಲ ಸಭೆ ನಡೆಸಿodoejz.
ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಸಿದ್ಧತೆಗಳನ್ನು ಪರಿಶೀಲಿಸಿದ ಕುಮಾರಸ್ವಾಮಿ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಸೂಚಿಸಿದರು. ಅಲ್ಲದೆ, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ನಡುವೆ ಕ್ಷೇತ್ರ ಮಟ್ಟದಲ್ಲಿ ಸಮನ್ವಯ ಹೇಗಿದೆ ಎಂಬ ಬಗ್ಗೆಯೂ ಮಾಹಿತಿ ಪಡೆದರು.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವಿನ ಹೊಂದಾಣಿಕೆಯನ್ನು ಸುಧಾರಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.
ಇತ್ತ, ಕಾಂಗ್ರೆಸ್ ಕೂಡ ಚುನಾವಣಾ ಸಿದ್ಧತೆಗಳನ್ನು ಆರಂಭಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
ಮುಂಬರುವ ಚುನಾವಣೆಗಳಿಗಾಗಿ ನಾವು ಪಕ್ಷವನ್ನು ಪುನಶ್ಚೇತನಗೊಳಿಸುತ್ತಿದ್ದೇವೆ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಈಗಾಗಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ ಹೊಸ ಬ್ಲಾಕ್ ಅಧ್ಯಕ್ಷರ ನೇಮಕ ಪ್ರಕ್ರಿಯೆಯೂ ನಡೆಯಲಿದೆ ಎಂದು ಹೇಳಿದ್ದಾರೆ.
ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡದ 80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮತದಾರರನ್ನು ತಲುಪುವ ಉದ್ದೇಶದಿಂದ ಕಾಂಗ್ರೆಸ್ ಜನ ಜೋಡೋ ಜಾಗೃತಿ ಯಾತ್ರೆಯನ್ನು ಆರಂಭಿಸಿದೆ. ಈ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಜನರೊಂದಿಗೆ ಸಂಪರ್ಕ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ ಬಿಜೆಪಿ ಕೂಡ ಚುನಾವಣಾ ಪೂರ್ವ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಕೆಲ ದಿನಗಳ ಹಿಂದೆ ಪಕ್ಷದ ಸಂಘಟನಾ ನಾಯಕರು ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಚುನಾವಣಾ ಸಿದ್ಧತೆಗಳು ಆರಂಭವಾಗಿದ್ದು, ತಂಡಗಳು ಈಗಾಗಲೇ ಕಾರ್ಯಪ್ರವೃತ್ತವಾಗಿವೆ.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದತ್ತ ಸೆಳೆಯಲು ನಾಯಕರಿಗೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳು ಮತ್ತು ಯುವಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಿರಂತರ ಹೋರಾಟಗಳನ್ನು ನಡೆಸುವ ಮೂಲಕ ಅವರೊಂದಿಗೆ ಸಂಪರ್ಕ ಸಾಧಿಸಲು ಪಕ್ಷಗಳು ಯೋಜಿಸಿವೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ವಿವಿಧ ಹಂತಗಳ ಚುನಾವಣೆಗೆ ತಮ್ಮ ಕಾರ್ಯತಂತ್ರವನ್ನು ರೂಪಿಸುವುದು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವಿನ ಸಮನ್ವಯವನ್ನು ಖಚಿತಪಡಿಸಿಕೊಳ್ಳುವುದು ಈ ಮೂರೂ ಪಕ್ಷಗಳ ಸಭೆ ಹಾಗೂ ಸಮಾಲೋಚನೆಗಳ ಪ್ರಮುಖ ಉದ್ದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



