ನ್ಯಾಯಾಂಗದ ಮೇಲೆ ಒತ್ತಡ ಹೇರುವುದು ಪ್ರಜಾಪ್ರಭುತ್ವ ವಿರೋಧಿ, INDIA ಒಕ್ಕೂಟದ ಪಾದಯಾತ್ರೆ ಕಾನೂನುಬಾಹಿರ: ಸಂಸದ ಬೊಮ್ಮಾಯಿ
ರಾಜಕೀಯ ಪ್ರೇರಿತ ಹಾಗೂ ದುರುದ್ದೇಶಪೂರಿತ ಉದ್ದೇಶಗಳಿಂದ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುವುದು ಆತಂಕಕಾರಿ ಸಂಗತಿ.

ಬೆಂಗಳೂರು: ಸುಪ್ರೀಂ ಕೋರ್ಟ್ ಮೇಲೆ ಅನಗತ್ಯ ಒತ್ತಡ ಹೇರುವ ಉದ್ದೇಶದಿಂದ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಸಂವಿಧಾನಿಕ, ಕಾನೂನುಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರಕರಣಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತ ಅರ್ಜಿಗಳು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿವೆ. ನ್ಯಾಯಾಲಯವು ಸತ್ಯ, ವಾಸ್ತವಾಂಶಗಳು ಮತ್ತು ಕಾನೂನಿನ ಆಧಾರದ ಮೇಲೆ ತೀರ್ಪು ನೀಡುತ್ತದೆ ಎಂದು ಹೇಳಿದ್ದಾರೆ.
ರಾಜಕೀಯ ಪ್ರೇರಿತ ಹಾಗೂ ದುರುದ್ದೇಶಪೂರಿತ ಉದ್ದೇಶಗಳಿಂದ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುವುದು ಆತಂಕಕಾರಿ ಸಂಗತಿ. ಭವಿಷ್ಯದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿರುದ್ಧವೇ ಬಂಡಾಯಕ್ಕೆ ಪ್ರಚೋದನೆ ನೀಡುವ ಪ್ರಯತ್ನದ ಮೊದಲ ಹೆಜ್ಜೆಯಂತೆ ಇದು ಕಾಣುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕರ್ನಾಟಕ ಹೈಕೋರ್ಟ್ SC/ST ಮೀಸಲಾತಿ ಹೆಚ್ಚಳವನ್ನು ರದ್ದುಗೊಳಿಸಿರುವ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದ್ದಾರೆ. ಅಲ್ಲದೆಸ, ಸರ್ಕಾರ ಈ ಕ್ರಮ ಕೈಗೊಳ್ಳದಿದ್ದರೆ ತಾವೇ ಸುಪ್ರೀಂ ಕೋರ್ಟ್ಗೆ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ತಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಳವನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯ ಆಧಾರದ ಮೇಲೆ ಜಾರಿಗೆ ತರಲಾಗಿತ್ತು. ಅಲ್ಲದೆ, ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲೂ ಮಸೂದೆ ಅಂಗೀಕರಿಸಲಾಗಿತ್ತು ಎಂದು ಹೇಳಿದ್ದಾರೆ.
SC ಮತ್ತು ST ಸಮುದಾಯಗಳ ಅಭಿವೃದ್ಧಿಯನ್ನು ವಿರೋಧಿಸುವ ಉದ್ದೇಶದಿಂದಲೇ ಕೆಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ವಿಚಾರವನ್ನು ರಾಜ್ಯ ಸರ್ಕಾರ ಖಂಡಿತವಾಗಿಯೂ ಸುಪ್ರೀಂ ಕೋರ್ಟ್ಗೆ ಕೊಂಡೊಯ್ಯಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



