ರಾಜಕೀಯ

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ.

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ರಾಜ್ಯ ಸರ್ಕಾರವು ನಮ್ಮ ಜನತಾದಳ ಜಾತ್ಯತೀತ ಸಾಮಾಜಿಕ ಮಾಧ್ಯಮ ತಂಡದ ಯುವ ಸದಸ್ಯರನ್ನು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಶಂಕರ್ ನನ್ನು ವಶಕ್ಕೆ ಪಡೆಯಲಾಗಿದ್ದು ತಂಡದ ಮತ್ತೊಬ್ಬ ಸದಸ್ಯ ಮೋಹನ್ ಮತ್ತು ಅವರ ಕುಟುಂಬದ ಮೇಲೆ ಕಿರುಕುಳ ನೀಡಲಾಗುತ್ತಿದೆ ಎಂಬ ವರದಿಗಳು ನನಗೆ ಬಂದಿವೆ. ಈ ಯುವಕರನ್ನು ಏಕೆ ಗುರಿಯಾಗಿಸಲಾಗುತ್ತಿದೆ ಮತ್ತು ಯಾವ ಅಧಿಕಾರದ ಅಡಿಯಲ್ಲಿ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ. ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ Janata Dal Secular ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, "ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ! ಸಾಕು ಮಾಡಿ ನಿಮ್ಮ ಕಪಟ ನಾಟಕ.

ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ?

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ! ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ. ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ.. ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.