ರಾಜಕೀಯ

ನಮ್ಮದು ಸೌಜನ್ಯದ ಭೇಟಿ: ರಮೇಶ್ ಜಾರಕಿಹೊಳಿ ಬಂದು ಊಟ ಮಾಡಿ ಹೋದ್ರು ಅಷ್ಟೇ; ಸಿದ್ದರಾಮಯ್ಯ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಬಂದಿದ್ದು ಉಭಯಕುಶಲೋಪರಿಗೆ, ಬಂದು ಊಟ ಮಾಡಿ ಹೋದ್ರು ಅಷ್ಟೆ ಎಂದು ತಿಳಿಸಿದ್ದಾರೆ.

ನಮ್ಮದು ಸೌಜನ್ಯದ ಭೇಟಿ: ರಮೇಶ್ ಜಾರಕಿಹೊಳಿ ಬಂದು ಊಟ ಮಾಡಿ ಹೋದ್ರು ಅಷ್ಟೇ; ಸಿದ್ದರಾಮಯ್ಯ
ಸಿದ್ದರಾಮಯ್ಯ ಭೇಟಿಯಾದ ರಮೇಶ್ ಜಾರಕಿಹೊಳಿ
Published On :

ಮೈಸೂರು: ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಬಂದಿದ್ದು ಉಭಯಕುಶಲೋಪರಿಗೆ, ಬಂದು ಊಟ ಮಾಡಿ ಹೋದ್ರು ಅಷ್ಟೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ರಮೇಶ್‌ ಜಾರಕಿಹೊಳಿ ಮಾತನಾಡಿ, ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತರಬಾರದಿತ್ತು. ಧೈರ್ಯವಾಗಿ ಎದುರಿಸಿ ಫೈಟ್ ಮಾಡಬೇಕಿತ್ತು ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಯಾವ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ನಾನು ಈಗ ಆ ಸ್ಟಿಂಗ್ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ. ನಾನು ಬೇರೆಯದೇ ವಿಚಾರವಾಗಿ ಅವರನ್ನು ಮಾತನಾಡಿಸಲು ಬಂದಿದ್ದೆ. ಇದು ಖಾಸಗಿ ಭೇಟಿ ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದ್ದಾರೆ.

ಸ್ಟಿಂಗ್‌ ಆಪರೇಷನ್‌ ಸದ್ದು ಮಾಡುತ್ತಿರುವ ಈ ಸಂದರ್ಭದಲ್ಲಿ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ. ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದ ಜಾರಕಿಹೊಳಿ, ಇದೊಂದು ಸೌಜನ್ಯದ ಹಾಗೂ ಖಾಸಗಿ ಭೇಟಿ. ಮಾರುವೇಷದ ಕಾರ್ಯಾಚರಣೆ ಮೊದಲಾದವುಗಳ ಕುರಿತು ನಾನು ಈಗ ಮಾತನಾಡುವುದಿಲ್ಲ. ನಾನು ಬೇರೆ ವಿಷಯ ಚರ್ಚಿಸಲು ಬಂದಿದ್ದೆ ಎಂದರು.

ಮುಜರಾಯಿ ಸಚಿವ ಕೆ.ಎಸ್.ಬಸವಂತಪ್ಪ ಅವರೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಜೊತೆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.