AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video
ಇತ್ತೀಚಿಗೆ ಅಕ್ಕ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ, ಅಲ್ಲಿಂದ ಬಂದ ಮೇಲೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್(RDPR) ಸಚಿವರಾಗಿದ್ದಾಗ ನಡೆದ ಸಹಾಯಕ ಕಾರ್ಯಪಾಲಕ ಎಂಜಿನಿಯರ್(AEE) ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚಿಗೆ ಅಕ್ಕ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ, ಅಲ್ಲಿಂದ ಬಂದ ಮೇಲೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ನಿಮ್ಮ ಗಮನಕ್ಕೆ ಬಂದಿಲ್ಲ ಎಂದರೆ ಯಾರ ಕಿವಿಗೆ ಹೂ ಮುಡಿಸುತ್ತಿದ್ದೀರಿ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಅಕ್ರಮದ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿರುವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ
ಪರೀಕ್ಷೆ ನಡೆಸಿ ಪಟ್ಟಿ ಕೊಡುವುದು ಮಾತ್ರ ಕೆಪಿಎಸ್‌ಸಿ ಕೆಲಸ, ನೇಮಕಾತಿ ಆದೇಶ ನೀಡುವುದು ಇಲಾಖೆಯ ಜವಾಬ್ದಾರಿ. ಹೀಗಿರುವಾಗ ನಿಮ್ಮ ಇಲಾಖೆಯಿಂದ ನೇಮಕಾತಿ ಪತ್ರ ಹೋಗುವಾಗ ಅಕ್ರಮ ನಿಮ್ಮ ಗಮನಕ್ಕೆ ಬರಲಿಲ್ಲವೇ?
ಈ ಅಕ್ರಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದು ನಿಮ್ಮ ಗಮನಕ್ಕೆ ಇರಲಿಲ್ಲವೇ?
ಕಳೆದ ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಸರಿಯಾದ ಮಾಹಿತಿ ನೀಡದೆ ಪ್ರಕರಣವನ್ನು ಎಳೆಯುತ್ತಿರುವುದು ಏಕೆ?
ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಉಪಸಮಿತಿ ಸ್ಪಷ್ಟ ವರದಿ ನೀಡಿದ ಮೇಲೂ ಸರ್ಕಾರ ಷರತ್ತುಬದ್ಧವಾಗಿ 24 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿದ್ದು ಏಕೆ?
ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಅಭಿಪ್ರಾಯಪಟ್ಟಿದ್ದು ನಿಮ್ಮ ಗಮನಕ್ಕೆ ಬಂದಿಲ್ಲವೇ?
ಅಕ್ರಮದ ಮಾಹಿತಿ ಇರಲಿಲ್ಲವೆಂದಾದರೆ, ಉಪಸಮಿತಿ ವರದಿ ಆಧರಿಸಿ ನೀವೇಕೆ ಇಲಾಖಾ ಮಟ್ಟದಲ್ಲಿ ತನಿಖೆ ನಡೆಸಲಿಲ್ಲ?
ಪ್ರಕ್ರಿಯೆಯಲ್ಲಿ ಲೋಪವಿರುವುದು ಗೊತ್ತಿದ್ದೇ ಷರತ್ತುಬದ್ಧ ನೇಮಕಾತಿ ನೀಡಲಾಯಿತೇ? ಅಕ್ರಮ ನಡೆದಿದ್ದರೂ ಇಷ್ಟು ತರಾತುರಿಯಲ್ಲಿ ನೇಮಕಾತಿ ಆದೇಶ ಪತ್ರ ಕೊಟ್ಟಿದ್ದರ ಹಿಂದಿನ ಮರ್ಮವೇನು?
ಅಭ್ಯರ್ಥಿಗಳಿಗೆ ನೇಮಕಾತಿ ನೀಡಿದ ಬಳಿಕ ಅವರ ಕೈಯಿಂದಲೇ ಕೆಎಟಿಗೆ ಅರ್ಜಿ ಸಲ್ಲಿಸುವಂತೆ ಮಾಡಿದ್ದು ಯಾರು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



