KPSC ಹಗರಣ: ಬಸವರಾಜ್ ಕನ್ನಾಳೆ ಬಗ್ಗೆ ಮೌನವೇಕೆ? ಕೂಗಾಡಿ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ; BJPಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಗಟ್ಟಿಯಾಗಿ ಕೂಗಾಡಿದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಆದ್ದರಿಂದ, ನನ್ನ ರಾಜೀನಾಮೆಯನ್ನು ಒತ್ತಾಯಿಸುವ ಬದಲು, ಬಿಜೆಪಿ ಈ ಕೆಳಗಿನ ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ...

ಬೆಂಗಳೂರು: KPSC ಹಗರಣ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಜೋರಾಗಿ ಕೂಗಾಡುವುದರಿಂದ ಸತ್ಯವನ್ನು ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆಯವರು, ನನ್ನ ರಾಜೀನಾಮೆಗಾಗಿ ಹಠ ಹಿಡಿದಿರುವ ಬಿಜೆಪಿ ನಾಯಕರ ನೈತಿಕತೆಯನ್ನು ಪ್ರಶ್ನಿಸಿ, ಈ ಹಗರಣದ ಮುಖ್ಯ ಆರೋಪಿಗಳಾದ ಬಸವರಾಜ ಕನ್ನಾಳೆ ಮತ್ತು ಕೆಪಿಎಸ್‌ಸಿಯ ಅಮಾನತುಗೊಂಡ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿಷಯದಲ್ಲಿ ಬಿಜೆಪಿ ಮೌನವಾಗಿರುವುದೇಗೆ ಎಂದು ಕೇಳಿದ್ದಾರೆ.
ಗಟ್ಟಿಯಾಗಿ ಕೂಗಾಡಿದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಆದ್ದರಿಂದ, ನನ್ನ ರಾಜೀನಾಮೆಯನ್ನು ಒತ್ತಾಯಿಸುವ ಬದಲು, ಬಿಜೆಪಿ ಈ ಕೆಳಗಿನ ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ...
KPSC ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಬಸವರಾಜ ಕನ್ನಾಳೆ ಅವರ ವಿಷಯದಲ್ಲಿ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ? ಅವರು ಬಿಜೆಪಿಯ ಅಧಿಕೃತ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಗಳಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಾರೆ.
ಅವರ "ಅಪ್ಪಾಜಿ"ಯ ಆಶೀರ್ವಾದ ಪಡೆಯುತ್ತಿರುವುದು ಕಂಡುಬರುತ್ತದೆ. ಬಿಜೆಪಿ ನಾಯಕರು ಅವರ ಹುಟ್ಟುಹಬ್ಬದ ಆಚರಣೆಗಳಲ್ಲಿ ಭಾಗವಹಿಸುತ್ತಾರೆ. ಅವರ ಉದ್ಯಮಗಳಿಗೆ ಚಾಲನೆ ನೀಡುವುದನ್ನು ಹಾಗೂ ಅವರಿಗೆ ಅತ್ಯಂತ ಪ್ರೀತಿಯಿಂದ ತಿನಿಸುವುದನ್ನು ಕಾಣಬಹುದು.
ಹೀಗಿರುವಾಗ ಬಿಜೆಪಿಗರು ನನ್ನ ರಾಜೀನಾಮೆಗೆ ಮಾತ್ರ ಒತ್ತಾಯಿಸುತ್ತಾರೆ. ದೇಶದಿಂದ ಪರಾರಿಯಾಗಲು ಬಸವರಾಜ ಕನ್ನಾಳೆ ನಡೆಸಿದರೆನ್ನಲಾದ ಪ್ರಯತ್ನದ ಬಗ್ಗೆ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ? ಶಿವಶಂಕರಪ್ಪ ಸಾಹುಕಾರ್ ವಿಷಯ ಬಂದಾಗ ಅವರ ಬಾಯಿ ಏಕೆ ಮುಚ್ಚಿಕೊಂಡಿದೆ?
ಮತ್ತು ಇನ್ನೂ ದೊಡ್ಡ ಪ್ರಶ್ನೆಯೊಂದಿದೆ... ಜನರನ್ನು KPSC ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ನಾಯಕರು ಎಷ್ಟು ಹಣ ಪಡೆದಿದ್ದಾರೆ? ವಾಸ್ತವವಾಗಿ ಎಷ್ಟು ಬಿಜೆಪಿ ನಾಯಕರು KPSC ಹಗರಣದ ಬಗ್ಗೆ ಮಾತನಾಡಿದ್ದಾರೆ ಅಥವಾ ಹೊಣೆಗಾರಿಕೆಯನ್ನು ಒತ್ತಾಯಿಸಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



